Team India ಎದುರು ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಬಾಂಗ್ಲಾ; ಉಭಯ ತಂಡಗಳ ಪ್ಲೇಯಿಂಗ್​ 11 ಹೀಗಿದೆ

ind vs Ban
Published on

ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ (Team India) ಹಾಗೂ ಬಾಂಗ್ಲಾದೇಶ (Bangladesh) ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಉಭಯ ತಂಡಗಳ ಬಲಿಷ್ಠ ಪ್ಲೇಯಿಂಗ್​ 11ಅನ್ನು ಕಣಕ್ಕಿಳಿಸಿದ್ದು, ಭಾರತ ತಂಡದ (Team India) ಪ್ಲೇಯಿಂಗ್ ಇಲೆವೆನ್​ನಲ್ಲಿ ಐವರು ಬ್ಯಾಟರ್​ಗಳು, ಮೂವರು ಆಲ್​ರೌಂಡರ್​ಗಳು ಹಾಗೂ ಮೂವರು ಪರಿಪೂರ್ಣ ಬೌಲರ್​ಗಳಿಗೆ ಸ್ಥಾನ ನೀಡಲಾಗಿದೆ.

ಉಭಯ ತಂಡಗಳ ಪ್ಲೇಯಿಂಗ್​ 11 ಹೀಗಿದೆ

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ.

ಬಾಂಗ್ಲಾದೇಶ: ತಂಝಿದ್ ಹಸನ್, ಸೌಮ್ಯ ಸರ್ಕಾರ್, ನಜ್ಮುಲ್ ಹೊಸೈನ್ ಶಾಂತೋ (ನಾಯಕ), ತೌಹಿದ್ ಹೃದೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಝ್, ಜೇಕರ್ ಅಲಿ, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮುಸ್ತಫಿಝುರ್ ರಹಮಾನ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net