ನಾವೇನಾದರೂ ಸೋತರೆ ಅದಕ್ಕೆ ಕಾರಣ... Team India ಕುರಿತು ದಿಗ್ಗಜ ಆಟಗಾರನ ಹೇಳಿಕೆ ವೈರಲ್​

Team India
Published on

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಭಾರತ (Team India) ಹಾಗೂ ಆಸ್ಟ್ರೇಲಿಯಾ (Australias) ನಡುವಿನ ಬಾರ್ಡರ್​ ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್​ ಸರಣಿಯ ಕೊನೆ ಪಂದ್ಯದಲ್ಲಿ ಪ್ರವಾಸಿ ತಂಡವು 158 ರನ್​ಗಳಿಗೆ ಆಲೌಟ್​ ಆಗಿದ್ದು, ಆತಿಥೇಯರಿಗೆ 162ರನ್​ಗಳ ಗುರಿಯನ್ನು ನೀಡಲಾಗಿದೆ. ಇನ್ನೂ ಎರಡನೇ ಇನ್ನಿಂಗ್ಸ್​ನಲ್ಲಿ ಬಿರುಸಿನ ಆಟವಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದ ರಿಷಭ್​ ಪಂತ್ ಆಟಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಆರಂಭಿಕ ಬ್ಯಾಟ್ಸ್​ಮನ್​ಗಳ ಆಟ ತೀವ್ರ ಟೀಕೆಗೆ ಗುರಿಯಾಗಿದೆ.

ಮೆಲ್ಬೋರ್ನ್​ನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಆಕ್ರಮಣಕಾರಿ ಆಟವಾಡಿ ಮಾಜಿ ಕ್ರಿಕೆಟಿಗ ಸುನಿಲ್​ ಗವಾಸ್ಕರ್​ ಕೆಂಗಣ್ಣಿಗೆ ಗುರಿಯಾಗಿದ್ದ ರಿಷಭ್​ ಪಂತ್​ ಸಿಡ್ನಿ ಟೆಸ್ಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಹಾಡಿಹೊಗಳಿದ್ದಾರೆ. ಆದರೆ, ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ಕೆ.ಎಲ್. ರಾಹುಲ್​ ಆಕ್ರಮಣಕಾರಿ ಆಟವಾಡಿದ್ದೆ ತಂಡ (Team India) ಸಂಕಷ್ಟಕ್ಕೆ ಸಿಲುಕಿದೆ ಎಂದು ಸುನಿಲ್​ ಗವಾಸ್ಕರ್​ ಕಿಡಿಕಾರಿದ್ದಾರೆ.

Sunil Gavaskar

ಎರಡನೇ ದಿನದಾಟ ಅಂತ್ಯಗೊಂಡ ಬಳಿಕ ಈ ಬಗ್ಗೆ ಮಾತನಾಡಿದ ಗವಾಸ್ಕರ್​, ಪ್ರಾಬಲ್ಯ ಸಾಧಿಸುವ ನಿಟ್ಟಿನಲ್ಲಿ ಟೀಮ್​ ಇಂಡಿಯಾ ವಿಕೆಟ್​ ಕಳೆದುಕೊಳ್ಳುತ್ತಿರುವುದು ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದು ಎರಡನೇ ದಿನ. ಇಷ್ಟು ಆತುರವಾಗಿ ರನ್​ಗಳಿಸುವ ಆತುರವಾದರೂ ಏನಿದೆ. ಈ ಪಿಚ್‌ನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಲ್ಲ ಆದರೆ ಆತುರಪಡಬೇಕು ಎಂದಲ್ಲ. ಒಂದು ವೇಳೆ ಪಂದ್ಯವನ್ನು ನಾವು ಸೋತರೆ ಅದಕ್ಕೆ ಈ ಆತುರವೇ ಕಾರಣ ಎಂದು ಮಾಜಿ ಕ್ರಿಕೆಟಿಗ ಸುನಿಲ್​ ಗವಾಸ್ಕರ್ ಹೇಳಿದ್ದಾರೆ.

ರೋಚಕ ಘಟ್ಟದತ್ತ ಸಿಡ್ನಿ ಟೆಸ್ಟ್

ಸಿಡ್ನಿ ಟೆಸ್ಟ್​ ಪಂದ್ಯವು ರೋಚಕ ಘಟ್ಟ ತಲುಪಿದ್ದು, ಮೂರನೇ ದಿನದಾಟಕ್ಕೆ ಮ್ಯಾಚ್​ ಮುಕ್ತಾಯವಾಗುವುದು ಬಹುತೇಕ ಖಾತ್ರಿಯಾಗಿದೆ. ಮೊದಲ ಇನ್ನಿಂಗ್ಸ್​ನಲ್ಲಿ ರನ್​ ಗಳಿಸಲು ಪರದಾಡಿದ್ದ ಭಾರತ ತಂಡವು (Team India) ಎರಡನೇ ಇನ್ನಿಂಗ್ಸ್​ನಲ್ಲಿ ಆಕ್ರಮಣಕಾರಿ ಆಟಕ್ಕೆ ಹೆಚ್ಚು ಒತ್ತು ನೀಡಿತ್ತು. ಪ್ರಸ್ತುತ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಮಾಡುತ್ತಿದ್ದು, 3 ವಿಕೆಟ್​ ನಷ್ಟಕ್ಕೆ 70 ರನ್​ಗಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net