

ಬೆಂಗಳೂರು: ರಾಜಸ್ಥಾನದ ಗಂಗಾನಗರದಲ್ಲಿ ಜೂ. 6ರಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಷ್ಟ್ರಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ಗೆ ರಾಜಧಾನಿ ಬೆಂಗಳೂರಿನಿಂದ ಇಬ್ಬರು ಆಯ್ಕೆ ಆಗಿದ್ದಾರೆ.
ಬೆಂಗಳೂರಿನ ಬಾಲಾರ್ಕ ಫಿಟ್‌ನೆಸ್ ಸೆಂಟರ್‌ನ ದೇವಿಕಾ ದೇಸಾಯಿ ಹಾಗೂ ದಿಶಾ ಮೋಹನ್ ಅವರು ಈ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ದೇವಿಕಾ ದೇಸಾಯಿ 84+ ಕೆ.ಜಿ. ಸಬ್ ಜೂನಿಯರ್ ವಿಭಾಗದಲ್ಲಿ ಬೆಂಗಳೂರು ಜಿಲ್ಲಾ ಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕದ ಜೊತೆಗೆ ಸ್ಟ್ರಾಂಗ್ ವಿಮೆನ್ ಸಬ್ ಜೂನಿಯರ್ ಪ್ರಶಸ್ತಿ ಕೂಡ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದರು. ಬಳಿಕ ರಾಜ್ಯಮಟ್ಟದಲ್ಲಿ ಚಿನ್ನ ಪಡೆಯುವ ಮೂಲಕ ರಾಷ್ಟ್ರಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ಗೆ ಆಯ್ಕೆ ಆಗಿದ್ದಾರೆ.
ದಿಶಾ ಮೋಹನ್ 57 ಕೆ.ಜಿ. ಸಬ್ ಜೂನಿಯರ್ ವಿಭಾಗದಲ್ಲಿ ಬೆಂಗಳೂರು ಜಿಲ್ಲಾ ಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದರು. ಅಲ್ಲದೆ ರಾಜ್ಯಮಟ್ಟದಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ರಾಷ್ಟಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ಗೆ ಆಯ್ಕೆ ಆಗಿದ್ದಾರೆ.
ದೇವಿಕಾ ದೇಸಾಯಿ ಹಾಗೂ ದಿಶಾ ಮೋಹನ್ ಇಬ್ಬರೂ ಬಾಲಾರ್ಕ ಫಿಟ್‌ನೆಸ್ ಸೆಂಟರ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್ ವಿಶ್ವನಾಥ್ ಭಾಸ್ಕರ ಗಾಣಿಗ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.