

2025ರ ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಭಾರತದ ತಂಡದ ಗೆಲುವನ್ನು ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಣೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ(Captain) ಸೂರ್ಯಕುಮಾರ್ ಯಾದವ್ ಹೇಳಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತ ಕುಟುಂಬಗಳಿಗೆ ಭಾರತೀಯ ಸಶಸ್ತ್ರ ಪಡೆಗಳು ಸಹ ಬೆಂಬಲವಾಗಿ ನಿಲ್ಲುತ್ತವೆ ಎಂದು ಹೇಳಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ. ನಾವು ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ. ಬಹಳಷ್ಟು ಧೈರ್ಯ, ಸಾಹಸ ತೋರಿಸಿದ ನಮ್ಮ ಎಲ್ಲಾ ಸಶಸ್ತ್ರ ಪಡೆಗಳಿಗೆ ಈ ಗೆಲುವನ್ನು ಅರ್ಪಿಸಲು ಬಯಸುತ್ತೇವೆ. ಅವರು ನಮಗೆಲ್ಲರಿಗೂ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಾರೆ ಎಂದು ಭಾವಿಸುತ್ತೇವೆ ಎಂದು ಪಂದ್ಯ ಮುಗಿದ ಬಳಿಕ ಹೇಳಿದರು.
ಭಾನುವಾರ (ಸೆ.14) ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಟಿ20 ಟೂರ್ನಿಯ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಜಿದ್ದಾಜಿದ್ದಿನ ಸೆಣೆಸಾಟ ನಡೆಸಿದವು. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ತಾನ ನಿಗದಿತ 20 ಒವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ಗಳಿಸಿತು. ಇನ್ನೂ 128 ರನ್ಗಳ ಗುರಿ ಬೆನ್ನಟ್ಟಿದ ಭಾರತ 15.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.(ಏಜೆನ್ಸೀಸ್)