VIDEO| ಟಿ-20 ವಿಶ್ವಚಾಂಪಿಯನ್ಸ್​​ಗೆ ಸ್ಟ್ಯಾಂಡಿಂಗ್​ ಓವೇಶನ್ ಕಂಡು ಗಳಗಳನೆ ಅತ್ತ ನೀತಾ ಅಂಬಾನಿ

Neeta Ambani
Published on

ಮುಂಬೈ:  ವಿಶ್ವದ ಟಾಪ್​ ಮೋಸ್ಟ್​ ಬಿಲೇನಿಯರ್​ಗಳಲ್ಲಿ ಒಬ್ಬರಾದ ಮುಖೇಶ್​ ಅಂಬಾನಿ ಅವರ ಕಿರಿಯ ಪುತ್ರ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರ ವಿವಾಹ ಕಾರ್ಯಕ್ರಮವು ಜುಲೈ 12ರಂದು ಮುಂಬೈನಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಒಂದಿಲ್ಲೊಂದು ಕಾರಣಕ್ಕೆ ಮದುವೆ ಕಾರ್ಯಕ್ರಮ ಸದ್ದು ಮಾಡುತ್ತಿದೆ.

ಇತ್ತೀಚಿಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್​ನಲ್ಲಿ ಟೀಮ್​ ಇಂಡಿಯಾ ಚಾಂಪಿಯನ್​ ಪಟ್ಟ ಅಲಂಕರಿಸಿದ್ದು, ವಿಶ್ವವಿಜೇತ ತಂಡದಲ್ಲಿ ಮುಂಬೈ ಇಂಡಿಯನ್ಸ್​ ತಂಡದ ನಾಲ್ವರು ಆಟಗಾರರಿರುವುದು ಮತ್ತಷ್ಟು ವಿಶೇಷವಾಗಿದೆ. ಟೀಮ್​ ಇಂಡಿಯಾವನ್ನು ಮುನ್ನಡೆಸಿದ್ದ ರೋಹಿತ್​ ಶರ್ಮಾ, ಸೂರ್ಯಕುಮಾರ್​ ಯಾದವ್, ಹಾರ್ದಿಕ್​ ಪಾಂಡ್ಯ, ಜಸ್ಪ್ರೀತ್​ ಬುಮ್ರಾ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇವರೆಲ್ಲರೂ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್​ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಅನಂತ್​-ರಾಧಿಕಾ ವಿವಾಹದ ಪ್ರಯುಕ್ತ ಆಯೋಜಿಸಲಾಗಿದ್ದ ಸಂಗೀತ್​ ಕಾರ್ಯಕ್ರಮದಲ್ಲಿ ಇವರಿಗೆ ಅದ್ಧೂರಿ ಸ್ವಾಗತ ದೊರೆತಿದೆ. ಈ ವೇಳೆ ನೀತಾ ಅಂಬಾನಿ ಭಾವುಕರಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಸಂಗೀತ್​ ಕಾರ್ಯಕ್ರಮದಲ್ಲಿ ಮಾತನಾಡಿದ ನೀತಾ, ನಾವೆಲ್ಲರೂ ಇಲ್ಲಿ ಒಂದು ಕುಟುಂಬವಾಗಿ ಸೇರಿದ್ದೇವೆ. ಇದರ ಹೊರತಾಗಿ ನನಗೆ ಇನ್ನೊಂದು ಕುಟುಂಬವಿದೆ. ಆ ಕುಟುಂಬ ಇಡೀ ರಾಷ್ಟ್ರವೇ ಹೆಮ್ಮೆ ಪಡುವಂತೆ ಮಾಡಿದೆ. ಅದು ಎಂತಹ ಅಗಾಧ ಭಾವನೆ ಎಂದು ನಾನು ಹೇಳಲಾರೆ. ವಿಶ್ವಕಪ್​ ವಿಜೇತರ ತಂಡದಲ್ಲಿ ಮುಂಬೈ ಇಂಡಿಯನ್ಸ್​ ತಂಡದ ಆಟಗಾರರಿರುವುದು ಸಂಭ್ರಮವನ್ನು ಡಬಲ್​ ಮಾಡಿದೆ. ಅನಂತ್​-ರಾಧಿಕಾಗಾಗಿ ಆಯೋಜಿಸಿರುವ ಸಂಗೀತ್​ ಸಂಜೆಯಲ್ಲಿ ನಾವು ಭಾರತದ ಗೆಲುವನ್ನು ಆಚರಿಸೋಣ ಎಂದು ನೀತಾ ಅಂಬಾನಿ ಹೇಳಿದ್ದಾರೆ.

ಈ ವೇಳೆ ಆಟಗಾರರನ್ನು ವೇದಿಕೆ ಮೇಲೆ ಕರೆದಾಗ ನೀತಾ ಅಂಬಾನಿ ಭಾವುಕರಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟಿದ್ದಕ್ಕೆ ಅಂಬಾನಿ ಕುಟುಂಬವು ಈ ನಾಲ್ವರು ಆಟಗಾರರಿಗೆ ವಿಶೇಷವಾಗಿ ಧನ್ಯವಾದಗಳನ್ನು ತಿಳಿಸಿದೆ. ಕಾರ್ಯಕ್ರಮದಲ್ಲಿ ಬಾಲಿವುಡ್​, ಭಾರತ ಕ್ರಿಕೆಟ್​ ತಂಡದ ಮಾಜಿ ಹಾಗೂ ಹಾಲಿ ಆಟಗಾರರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಶ್ವದ ಟಾಪ್​ ಮೋಸ್ಟ್​ ಬಿಲೇನಿಯರ್​ಗಳಲ್ಲಿ ಒಬ್ಬರಾದ ಮುಖೇಶ್​ ಅಂಬಾನಿ ಅವರ ಕಿರಿಯ ಪುತ್ರ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರ ವಿವಾಹ ಕಾರ್ಯಕ್ರಮವು ಜುಲೈ 12ರಂದು ಮುಂಬೈನಲ್ಲಿ ನಡೆಯಲಿದೆ. ಮುಂಬೈ ನಗರದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್​ನಲ್ಲಿರುವ ಜಿಯೋ ಕನ್ವೆನ್ಷನ್​ ಸೆಂಟರ್​ನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ನಡೆಯಲಿದೆ. ಸಾಂಪ್ರದಾಯಿಕ ಕೆಂಪು ಮತ್ತು ಚಿನ್ನದ ಕಾರ್ಡ್ ಆಗಿರುವ ‘ಸೇವ್‌ ದಿ ಡೇಟ್‌’ ಆಮಂತ್ರಣ ಪತ್ರಿಕೆಯನ್ನು ಅತಿಥಿಗಳು ಸ್ವೀಕರಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net