ರೈಲ್ವೆ ಕೆಲಸಕ್ಕೆ ರಾಜೀನಾಮೆ ನೀಡಿದ ವಿನೇಶ್ ಫೋಗಟ್!

Vinesh Phogat
Published on

ನವದೆಹಲಿ: ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರುವ ಕೆಲವೇ ಗಂಟೆಗಳ ಮೊದಲು ಭಾರತೀಯ ರೈಲ್ವೆಯಲ್ಲಿನ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.

ಫೋಗಟ್ ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಇದನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಜೀವನದ ಈ ನಿರ್ಣಾಯಕ ಹಂತದಲ್ಲಿ ರೈಲ್ವೇ ಉದ್ಯೋಗ ತ್ಯಜಿಸಲು ನಿರ್ಧರಿಸಿ ಸಂಬಂಧಪಟ್ಟ ರೈಲ್ವೇ ಅಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಹರಿಯಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಶುಕ್ರವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ವಿನೋಶ್ ಫೋಗಟ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಬಜರಂಗ್ ಪುನಿಯಾ ಅವರನ್ನು ಹರಿಯಾಣ ಚುನಾವಣಾ ಪ್ರಚಾರ ಸಮಿತಿಯ ಸಹ-ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಪಕ್ಷ ನೇಮಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ಫೋಗಟ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿದ್ದವು. ಈಗ ಅದು ನಿಜವಾದಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net