

ತಿರುವನಂತಪುರಂ: ಗ್ರೀನ್ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿತ್ತು. ಇದೀಗ ಟೀಮ್ ಇಂಡಿಯಾದ ಬ್ಯಾಟ್ಸ್ಮನ್ಗಳಾದ ಶುಭಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.
ನಾಯಕ್ ರೋಹಿತ್ ಶರ್ಮಾ ಜೊತೆಗೂಡಿ ಇನ್ನಿಂಗ್ಸ್ ಆರಂಭಿಸಿದ ಶುಭಮನ್ ಗಿಲ್ 96 ಎಸೆತಗಳಲ್ಲಿ 116 ರನ್ ಗಳಿಸಿ ತಮ್ಮ 2ನೇ ಏಕದಿನ ಶತಕ ದಾಖಲಿಸಿಕೊಂಡರು. ಈ ಇನ್ನಿಂಗ್ಸ್ನಲ್ಲಿ 2 ಸಿಕ್ಸ್ ಹಾಗೂ 14 ಫೋರ್ ಸಿಡಿಸಿದರು. ಮೊದಲ ವಿಕೆಟ್ಗೆ ಅಬ್ಬರದ ಬ್ಯಾಟಿಂಗ್ ಮಾಡಿದ ಗಿಲ್, ಒಂದೇ ಓವರ್ನಲ್ಲಿ ಸತತ 4 ಬೌಂಡರಿ ಬಾರಿಸಿದರು. ಅಲ್ಲದೆ ನಾಯಕ ರೋಹಿತ್ ಶರ್ಮಾ ಜೊತೆಗೂಡಿ ಮೊದಲ ವಿಕೆಟ್ಗೆ 95 ರನ್ಗಳ ಜೊತೆಯಾಟ ಆಡಿದರು.
ರೋಹಿತ್ ಶರ್ಮಾ ಔಟ್ ಆಗುತ್ತಿದ್ದಂತೆ ಕ್ರಿಸ್ಗೆ ಬಂದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಶುಭಮನ್ ಜೊತೆಗೆ ಇನ್ನಿಂಗ್ಸ್ ಕಟ್ಟಿರು. ನೋಡ ನೋಡುತ್ತಿದ್ದಂತೆ ತವರಿನ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಎರಡನೇ ಶತಕ ಬಾರಿಸಿದರು. 85 ಎಸೆತಗಳಲ್ಲಿ ತಮ್ಮ 46ನೇ ಅಂತಾರಾಷ್ಟ್ರೀಯ ಏಕದಿನ ಶತಕ ಪೂರೈಸಿದರು.