

ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ಮಧ್ಯೆ ವಾಂಖೆಡೆ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ನಲ್ಲಿ ವಿರಾಟರೂಪ ತೋರುತ್ತಿದ್ದು, ಕ್ರಿಕೆಟ್ ದೇವರ 20 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ಒಂದೇ ಏಕದಿನ ವಿಶ್ವಕಪ್ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಗಳಿಸುವ ಮೂಲಕ ಅವರು ಈ ದಾಖಲೆ ಮುರಿದಿದ್ದಾರೆ. ಸಚಿನ್ ತೆಂಡೂಲ್ಕರ್ 2003ರ ಏಕದಿನ ವಿಶ್ವಕಪ್ನಲ್ಲಿ 673 ರನ್ ಗಳಿಸಿದ್ದರು. ಆದರೆ ಇದೀಗ ವಿರಾಟ್ ಕೊಹ್ಲಿ 674 ರನ್ಗಳನ್ನು ಗಳಿಸಿ ಇನ್ನೂ ಅಜೇಯರಾಗಿ ಆಟ ಮುಂದುವರಿಸಿರುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ.
ಮಾತ್ರವಲ್ಲ, ಒಂದೇ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹತ್ತು ಇನ್ನಿಂಗ್ಸ್ನಲ್ಲಿ ಒಟ್ಟು 8 ಸಲ ಅರ್ಧ ಶತಕ ಬಾರಿಸುವ ಮೂಲಕ ಈ ದಾಖಲೆ ಮಾಡಿರುವ ಪ್ರಥಮ ಆಟಗಾರ ಎಂಬ ಖ್ಯಾತಿಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಸದ್ಯ 92 ರನ್ ಮಾಡಿರುವ ವಿರಾಟ್ ಕೊಹ್ಲಿ, ಸಚಿನ್ ಅವರ ಇನ್ನೊಂದು ದಾಖಲೆಯನ್ನೂ ಮುರಿಯುವುದು ನಿಚ್ಚಳವಾಗಿದೆ.