

ಬೆಂಗಳೂರು: ನವದೆಹಲಿಯಲ್ಲಿ ಗುರುವಾರ ನಡೆದ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲುಎಫ್ಐ) ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ದೇಶದ ಕುಸ್ತಿ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿ ಆಯ್ಕೆಯಾಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಕುಸ್ತಿ ಕ್ರೀಡೆಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಲ್ಲಿ ಈ ಹುದ್ದೆ ಅನುವು ಮಾಡಿಕೊಡಲಿದೆ. ನಮ್ಮ ರಾಜ್ಯ ಹಾಗೂ ದೇಶದ ಕುಸ್ತಿ ಕ್ರೀಡಾಪಟುಗಳು ಇನ್ನಷ್ಟು ಉತ್ತಮ ತರಬೇತಿ ಪಡೆಯುವಂತೆ ಮಾಡುವ ಗುರಿ ಮತ್ತು ಉದ್ದೇಶ ನನ್ನದಾಗಿದೆ ಎಂದಿದ್ದಾರೆ.