

ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಕುಸದತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಹಲವು ದಿನಗಳಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಜೂನ್ 7ರಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಜೊತೆ ಸಭೆ ನಡೆಸಿದ ಬಳಿಕ ಕುಸ್ತಿಪಟುಗಳು ಸರ್ಕಾರ ಕಾಲಾವಕಾಶ ಕೇಳಿದ ಕಾರಣ, ಜೂನ್ 15ರವರೆಗೆ ಪ್ರತಿಭಟನೆ ಮಾಡುವುದಿಲ್ಲ ಎಂದು ಕ್ರೀಡಾಪಟುಗಳು ತಿಳಿಸಿದ್ದರು.
ಈ ನಡುವೆ ಪ್ರತಿಭಟನಾ ನಿರತ ಕುಸ್ತಿಪಟು ಸಾಕ್ಷಿ ಮಲಿಕ್ ಮುಂಬರುವ ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿದರೆ ಮಾತ್ರ ನಾವು ಕ್ರೀಡಾಕೂಟದಲ್ಲಿ ಭಾಗವಹಿಸುತ್ತೇವೆ.
ನಾವು ಮಾನಸಿಕವಾಗಿ ಯಾವ ರೀತಿಯ ಯಾತನೆಯನ್ನು ಅನುಭವಿಸುತ್ತಿದ್ದೇವೆ ಎಂಬುದು ಯಾರಿಂದಲೂ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕುರಿತು ಕುಸ್ತಿಪಟು ಸಾಕ್ಷಿ ಮಲಿಕ್ ಪ್ರತಿಕ್ರಿಯಿಸಿದ್ದಾರೆ.
ಈ ನಡುವೆ ಪ್ರತಿಭಟನಾ ನಿರತರ ನಡುವೆ ವೈಮನಸ್ಸು ಉಂಟಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ನಾವೆಲ್ಲ ಒಟ್ಟಾಗಿದ್ದೇವೆ ಎಂದು ಸಾಕ್ಷಿ ಮಲಿಕ್ ತಿಳಿಸಿದ್ದಾರೆ.