

ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ ಕೇವಲ 22 ದಿನ ಬಾಕಿಯಿದ್ದು, ಅಫ್ಘಾನಿಸ್ತಾನ ತಂಡ ಬುಧವಾರ 15 ಆಟಗಾರರ ಆಯ್ಕೆ ಮಾಡಿದೆ. 2 ವರ್ಷಗಳ ಬಳಿಕ ವೇಗಿ ನವೀನ್-ಉಲ್-ಹಕ್ ತಂಡಕ್ಕೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಭಾರತ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರೊಂದಿಗೆ ಮಾತಿನ ಚಕಮಕಿ ನಡೆಸಿ ಸುದ್ದಿಯಾಗಿದ್ದ ನವೀನ್, 2021ರಲ್ಲಿ ಕೊನೆಯದಾಗಿ ಏಕದಿನ ಪಂದ್ಯವನ್ನಾಡ್ಡಿದ್ದಾರೆ.
ಅಫ್ಘಾನಿಸ್ತಾನ ತಂಡ: ಹಶ್ಮತ್ ಉಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಇಬ್ರಾಹಿಂ ಜದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜೀಬುಲ್ಲಾ ಝದ್ರಾನ್, ಮೊಹಮದ್ ನಬಿ, ಇಕ್ರಮ್ ಅಲಿಖಿಲ್ (ವಿ.ಕೀ), ಅಜ್ಮತ್ ಉಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ನೂರ್ ಅಹ್ಮದ್ ರೆಹಮಾನ್, ನವೀನ್-ಉಲ್-ಹಕ್.