ವಿಶ್ವಕಪ್ ಮಹಾಸಮರ; ಬೆಂಗಳೂರಿನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

world cup
ಫೋಟೋ: ಸುಧಿಂದ್ರ ಶ್ರೀರಂಗರಾಜು
Published on

ಬೆಂಗಳೂರು: ಅಹಮದಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂ ವಿಶ್ವಕಪ್ ಮಹಾಸಮರಕ್ಕೆ  ಸಾಕ್ಷಿಯಾಗುತ್ತಿದೆ. ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಪಂದ್ಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ  ಅಭಿಮಾನಿಗಳು ವಿಶ್ ಮಾಡುವುದರ ಜೊತೆಗೆ ಆಯಾ ದೇಗುಲಗಳಲ್ಲಿ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಬನಶಂಕರಿ ದೇವಸ್ಥಾನ ಹಾಗೂ ದೊಡ್ಡ ಗಣಪತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

ಕ್ರಿಕೆಟ್​​ ಅಭಿಮಾನಿಗಳು ಬೆಂಗಳೂರಿನ ಬನಶಂಕರಿ ದೇವಸ್ಥಾನ ಹಾಗೂ ದೊಡ್ಡ ಗಣಪತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

ಫೋಟೋ: ಸುಧಿಂದ್ರ ಶ್ರೀರಂಗರಾಜು
ಫೋಟೋ: ಸುಧಿಂದ್ರ ಶ್ರೀರಂಗರಾಜು

ಏಕದಿನ ವಿಶ್ವಕಪ್‌ ಇತಿಹಾದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್​ನಲ್ಲಿ ಮುಖಾಮುಖಿಯಾಗಿರುವುದು ಇದು ಎರಡನೇ ಬಾರಿ. 2003ರ ವಿಶ್ವಕಪ್‌ನಲ್ಲಿ ಮೊದಲ ಬಾರಿ ಮುಖಾಮುಖಿಯಾಗಿದ್ದವು. ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡ ಸೌರವ್ ಗಂಗೂಲಿ ನಾಯಕತ್ವದ ಭಾರತವನ್ನು ಸೋಲಿಸಿ ಟ್ರೋಫಿಯನ್ನು ಎತ್ತಿ ಹಿಡಿದಿತ್ತು.

ಫೋಟೋ: ಸುಧಿಂದ್ರ ಶ್ರೀರಂಗರಾಜು
ಫೋಟೋ: ಸುಧಿಂದ್ರ ಶ್ರೀರಂಗರಾಜು

ವಿಶ್ವಕಪ್‌ನಲ್ಲಿ ಭಾರತ ಫೈನಲ್‌ ಪ್ರವೇಶಿಸಿರುವುದು ಇದು ನಾಲ್ಕನೇ ಬಾರಿ. 1983, 2003 ಮತ್ತು 2011 ರಲ್ಲಿ ಫೈನಲ್ ತಲುಪಿದೆ ಮತ್ತು 1983 ಮತ್ತು 2011 ರಲ್ಲಿ ಪ್ರಶಸ್ತಿಯನ್ನು ಗೆದ್ದಿದೆ.

ಫೋಟೋ: ಸುಧಿಂದ್ರ ಶ್ರೀರಂಗರಾಜು
ಫೋಟೋ: ಸುಧಿಂದ್ರ ಶ್ರೀರಂಗರಾಜು

ಭಾರತ ಪ್ರಸಕ್ತ ವಿಶ್ವಕಪ್​ ಟೂರ್ನಿಯಲ್ಲಿ ಲೀಗ್​ ಹಂತದಲ್ಲಿ 9 ಮತ್ತು ಒಂದು ಸೆಮಿಫೈನಲ್​ ಸೇರಿ ಆಡಿದ 10 ಪಂದ್ಯಗಳಲ್ಲೂ ಜಯ ಸಾಧಿಸಿದೆ. ಪ್ರತಿಯಾಗಿ ಆಸ್ಟ್ರೇಲಿಯಾ ತಂಡ 10 ಪಂದ್ಯಗಳಲ್ಲಿ ಎರಡರಲ್ಲಿ ಸೋತು ಉಳಿದ ಎಂಟು ಪಂದ್ಯಗಳಲ್ಲಿ ಜಯಸಿದೆ. ಅ.8ರಂದು ಚೆನ್ನೈ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಲೀಗ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತು. ಇದೀಗ ಗುಜರಾತಿನ ಅಹಮದಾಬಾದ್​ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟ್ರೋಫಿಗಾಗಿ ಎರಡೂ ತಂಡಗಳು ಕಾದಾಡುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net