

ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕ್ರೀಡಾಪಟುಗಳು ದೆಹಲಿಯಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕುಸ್ತಪಟುಗಳು ಪ್ರಮುಖವಾಗಿ ಐದು ಬೇಡಿಕೆಗಳನ್ನು ಮುಂದಿರಿಸಿದ್ದಾರೆ ಎಂಧು ತಿಳಿದು ಬಂದಿದೆ. ತಮ್ಮ ಷರತ್ತುಗಳನ್ನು ಒಪ್ಪಿದ್ದಲ್ಲಿ ಪ್ರತಿಭಟನೆಯನ್ನು ಹಿಂಪಡೆಯುವುದಾಗಿ ತಿಳಿಸಿದ್ದರು. ತನಿಖೆ ಪ್ರಗತಿಯಲ್ಲಿದ್ದು ಜೂನ್ 15ರವರೆಗೆ ಕಾಲಾವಕಾಶವನ್ನು ಕೋರಲಾಗಿದೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಾಕ್ಷಿ ಮಲ್ಲಿಕ್ ತನಿಖೆ ಪ್ರಗತಿಯಲ್ಲಿದ್ದು ಜೂನ್ 15ರವೆರೆಗೆ ಯಾವುದೇ ರೀತಿಯ ಪ್ರತಿಭಟನೆ ಮಾಡದಂತೆ ಹೇಳಲಾಗಿದೆ ಎಂದು ಸಚಿವರ ಜೊತೆ ಸಭೆಯ ನಂತರ ತಿಳಿಸಿದ್ದಾರೆ.