

ಮುಂಬೈ: ಟೀಮ್ ಇಂಡಿಯಾ ಆಟಗಾರ ಯಜುವೇಂದ್ರ ಚಹಲ್-ಧನಶ್ರೀ ವಿಚ್ಛೇದನ ಸುದ್ದಿ ದಿನ ಕಳೆದಂತೆ ಹೊಸ ಆಯಾಮ ಪಡೆದುಕೊಳ್ಳುತ್ತಿದ್ದು, ದಂಪತಿಗಳು ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ಗಳನ್ನು ಮಾಡುತ್ತಿದ್ದಾರೆ. ವಿಚ್ಛೇದನ ವದಂತಿಗೆ ಸಂಬಂಧಿಸಿದಂತೆ ಧನಶ್ರೀ ಜನವರಿ 09ರಂದು ಪ್ರತಿಕ್ರಿಯಿಸಿದ್ದರು. ಇದೀಗ ಯಜುವೇಂದ್ರ ಚಹಲ್ (Yuzvendra Chahal) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ಹಂಚಿಕೊಳ್ಳುವ ಮೂಲಕ ಡಿವೋರ್ಸ್ ವಿಚಾರವಾಗಿ ಮೌನ ಮುರಿದಿದ್ದಾರೆ.
ಡಿವೋರ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಯಜುವೇಂದ್ರ ಚಹಲ್ (Yuzvendra Chahal), ನನ್ನ ಎಲ್ಲಾ ಅಭಿಮಾನಿಗಳಿಗೆ ಅವರ ಅಚಲವಾದ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ, ಇಲ್ಲದಿದ್ದರೆ ನಾನು ಇಲ್ಲಿಯವರೆಗೆ ಬರುತ್ತಿರಲಿಲ್ಲ. ಆದರೆ ಈ ಪ್ರಯಾಣವು ಇನ್ನೂ ದೂರವಿದೆ. ನನ್ನ ದೇಶಕ್ಕೆ ಕೊಡುಗೆ ನೀಡಲು ಅನೇಕ ಅದ್ಭುತ ಓವರ್ಗಳು ಬಾಕಿ ಉಳಿದಿವೆ. ನನ್ನ ತಂಡ ಹಾಗೂ ಅಭಿಮಾನಿಗಳಿಗೆ ನಾನು ಒಬ್ಬ ಮಗ, ಸಹೋದರ ಮತ್ತು ಸ್ನೇಹಿತರನಾಗಿದ್ದೇನೆ.
ವಿಶೇಷವಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ನಿಜವಾಗಿರಬಹುದಾದ ಅಥವಾ ಇಲ್ಲದೆಯೂ ಇರಬಹುದು. ವೈಯಕ್ತಿಕ ವಿಚಾರದ ಬಗ್ಗೆ ಊಹಾಪೋಹ ಹರಡುವುದನ್ನು ನಾನು ಗಮನಿಸಿದ್ದೇನೆ. ಏಕೆಂದರೆ ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ಅಪಾರ ನೋವನ್ನುಂಟುಮಾಡಿದೆ. ನನ್ನ ಕುಟುಂಬದ ಮೌಲ್ಯಗಳು ನನಗೆ ಒಳ್ಳೆಯದನ್ನು ಮಾಡಲು ಹೇಳಿಕೊಟ್ಟಿದೆ. ಎಲ್ಲರಿಗೂ ಒಳ್ಳೆಯದನ್ನು ಬಯಸಿ, ಸಾಧಿಸಲು ಶ್ರಮಿಸಿ. ಸಮರ್ಪಣೆ ಮತ್ತು ಕಠಿಣ ಪರಿಶ್ರಮದ ಮೂಲಕ ಯಶಸ್ಸು, ಶಾರ್ಟ್‌ಕಟ್‌ಗಳನ್ನು ತೆಗೆದುಕೊಳ್ಳುವ ಬದಲು, ಮತ್ತು ನಾನು ದೈವಿಕ ಆಶೀರ್ವಾದಗಳೊಂದಿಗೆ ಈ ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ, ನಾನು ನಿಮ್ಮ ಪ್ರೀತಿ ಮತ್ತು ಬೆಂಬಲವನ್ನು ಪಡೆಯಲು ಶಾಶ್ವತವಾಗಿ ಶ್ರಮಿಸುತ್ತೇನೆ ಎಂದು ಯಜುವೇಂದ್ರ ಚಹಲ್ (Yuzvendra Chahal) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.
ನಾನು, ನನ್ನ ಕುಟುಂಬದ ಸದಸ್ಯರು ಕಳೆದ ಕೆಲ ದಿನಗಳಿಂದ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಕೆಲವರು ಸತ್ಯ ತಿಳಿಯದೇ ಸುಳ್ಳು ಸುಳ್ಳನ್ನೇ ಬರೆಯುತ್ತಿದ್ದಾರೆ. ನನ್ನ ಖ್ಯಾತಿಗೆ ಕಳಂಕ ತರಲು ಆಧಾರರಹಿತ ಬರವಣಿಗೆ, ಸತ್ಯ-ಪರಿಶೋಧವಿಲ್ಲದ ಬರಹಗಳು ಮತ್ತು ದ್ವೇಷ ಹರಡುವ ಟ್ರೋಲ್‌ಗಳನ್ನು ಮಾಡುತ್ತಿದ್ದಾರೆ. ಹಲವು ವರ್ಷಗಳ ಕಾಲ ಶ್ರಮಿಸಿದ ನಂತರವೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ನಾನು ಮೌನವಾಗಿದ್ದ ಮಾತ್ರಕ್ಕೆ, ಅದು ನನ್ನ ದೌರ್ಬಲ್ಯ ಎಂದು ಭಾವಿಸಬೇಡಿ ಎಂದಿದ್ದರು.
ಇತರರಿಗೆ ಸಹಾನುಭೂತಿ ತೋರಿಸಲು ಧೈರ್ಯ ಬೇಕು. ನೈಜ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮೌಲ್ಯಗಳೊಂದಿಗೆ ಮುಂದುವರಿಯುವುದರಲ್ಲಿ ನಾನು ನಂಬಿಕೆ ಇಡುತ್ತೇನೆ. ಇಲ್ಲಿ ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ. ನಾನು ನನ್ನ ಸತ್ಯದ ಮೇಲೆ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯುವುದನ್ನು ಆಯ್ಕೆ ಮಾಡುತ್ತೇನೆ. ಯಾವುದೇ ಸಾಕ್ಷ್ಯಗಳಿಲ್ಲಿದ್ರೂ ಸತ್ಯವು ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ ಎಂದು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು.