ಕರೊನಾ ಕಂಟಕ ಹಿನ್ನೆಲೆ, ಜೂನ್​ನಲ್ಲಿ ಯುಎಸ್ ಓಪನ್ ಭವಿಷ್ಯ

page 10 3
Published on

ನ್ಯೂಯಾರ್ಕ್: ಕರೊನಾ ವೈರಸ್ ಭೀತಿಯ ನಡುವೆಯೂ ಯುಎಸ್ ಓಪನ್ ಗ್ರಾಂಡ್ ಸ್ಲಾಂ ಟೂರ್ನಿಯನ್ನು ನಿಗದಿಯಂತೆಯೇ ಆಯೋಜಿಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಜತೆಗೆ ಪ್ರೇಕ್ಷಕರಿಲ್ಲದೆ ಖಾಲಿ ಕ್ರೀಡಾಂಗಣದಲ್ಲಿ ಟೂರ್ನಿಯನ್ನು ನಡೆಸುವ ಸಾಧ್ಯತೆ ಕಡಿಮೆ ಎಂದು ಯುಎಸ್ ಟೆನಿಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಳಿದ್ದಾರೆ.

ಆಗಸ್ಟ್ 31ರಿಂದ ಸೆಪ್ಟೆಂಬರ್ 13ರವರೆಗೆ ನಿಗದಿಯಾಗಿರುವ ಟೂರ್ನಿಯ ಭವಿಷ್ಯವನ್ನು ಜೂನ್​ನಲ್ಲಿ ನಿರ್ಧರಿಸಲಾಗುವುದು ಎಂದಿದ್ದಾರೆ. ಪ್ರೇಕ್ಷಕರಿಲ್ಲದೆ ಟೆನಿಸ್ ಆಟವನ್ನು ಆನಂದಿಸಲು ಸಾಧ್ಯವಾಗದು. ನಮ್ಮದು ವರ್ಷದ 4ನೇ ಗ್ರಾಂಡ್ ಸ್ಲಾಂ ಟೂರ್ನಿಯಾಗಿರುವುದರಿಂದ ಸಿದ್ಧತೆಗಳನ್ನು ನಡೆಸಲು ಇನ್ನೂ ಸಾಕಷ್ಟು ಸಮಯಾವಕಾಶವಿದೆ. ಟೂರ್ನಿಯನ್ನು ಸಂಘಟಿಸುವುದೇ ನಮ್ಮ ಆದ್ಯತೆಯಾಗಿದೆ. ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ವೈದ್ಯಕೀಯ ತಜ್ಞರ ಸಲಹೆಯನ್ನು ಪಡೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net