

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ
ಇಲ್ಲಿಯ ರಾಜನಗರ ಕೆಎಸ್ ಸಿಎ ಮೈದಾನದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಮೆಂಟ್ ನ ಸಿ ಗುಂಪಿನ ಮೊದಲ ಲೀಗ್ ಪಂದ್ಯದಲ್ಲಿ ಆತಿಥೇಯ ಕರ್ನಾಟಕ, ಪಂಜಾಬ್ ವಿರುದ್ಧ 7ವಿಕೆಟ್ ಗಳಿಂದ ಜಯಗಳಿಸಿತು.
ಪಂದ್ಯದ ನಾಲ್ಕನೇಯ ಹಾಗೂ ಕೊನೆಯ ದಿನವಾದ ಸೋಮವಾರ ಚಹಾ ವಿರಾಮದ ಬಳಿಕ ಮಯಾಂಕ್ ಅಗರ್ವಾಲ್ ಸಾರಥ್ಯದ ಪಡೆ ದ್ವಿತೀಯ ಇನ್ನಿಂಗ್ಸ್ ನಲ್ಲಿ 3 ವಿಕೆಟ್ ಗೆ 52ರನ್ ಗಳಿಸಿ 2023-24 ನೇ ಸಾಲಿನ ರಣಜಿ ಟ್ರೋಫಿ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿದೆ.
ವಿಕೆಟ್ ಕೀಪರ್ ಬ್ಯಾಟರ್ ಎಸ್. ಶರತ್ ಅಜೇಯ 21 ಹಾಗೂ ಮನೀಷ ಪಾಂಡೆ ಅಜೇಯ 10 ರನ್ ಗಳಿಸಿದರು.
ಇದಕ್ಕೂ ಮೊದಲು ಪಂಜಾಬ್ ತಂಡ ದ್ವಿತೀಯ ಇನ್ನಿಂಗ್ಸ್ ನಲ್ಲಿ 413 ರನ್ ಗಳಿಸಿ ಕರ್ನಾಟಕದ ಗೆಲುವಿಗೆ 52 ರನ್ ಗಳ ಗುರಿ ನೀಡಿತ್ತು.
ಕರ್ನಾಟಕ ಪ್ರಥಮ ಇನ್ನಿಂಗ್ಸ್ ನಲ್ಲಿ 8 ವಿಕೆಟ್ ಗೆ 514 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಪಂಜಾಬ್ ಪ್ರಥಮ ಇನ್ನಿಂಗ್ಸ್ ನಲ್ಲಿ 152 ರನ್ ಗೆ ಆಲೌಟ್ ಆಗಿತ್ತು.