ಪಠ್ಯದ ಜತೆಗಿರಲಿ ಕ್ರೀಡಾಸಕ್ತಿ

ardi
Published on

ವಿಜಯವಾಣಿ ಸುದ್ದಿಜಾಲ ಆರ್ಡಿ

ವಿದ್ಯಾರ್ಥಿಗಳಲ್ಲಿ ಪಠ್ಯ, ಪಠ್ಯೇತರ ಶಿಕ್ಷಣದ ಜತೆ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದಾಗ ಆರೋಗ್ಯ, ಆತ್ಮಸ್ಥೆರ್ಯದೊಂದಿಗೆ ಉತ್ತಮ ಬೆಳವಣಿಗೆ ಕಾಣಲು ಸಾಧ್ಯ ಎಂದು ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ ಹೇಳಿದರು.

ಆರ್ಡಿ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಸಹಭಾಗಿತ್ವದಲ್ಲಿ ಇತ್ತೀಚೆಗೆ ನೂತನ ಬಾಲ್ ಬ್ಯಾಡ್ಮಿಂಟನ್ ಹಾಗೂ ಹ್ಯಾಂಡ್ ಬಾಲ್ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ರೀಡಾ ಪರಿಕರ ವಿತರಿಸಿ ಅವರು ಮಾತನಾಡಿದರು.

ಲಯನ್ಸ್ ಕ್ಲಬ್ ವಲಯ ಕಾರ್ಯದರ್ಶಿ ವೈ ಪಟ್ಟಾಭಿರಾಮ್ ಭಟ್ ಮರೂರು ಹ್ಯಾಂಡ್ ಬಾಲ್ ಕ್ರೀಡಾಂಗಣ ಉದ್ಘಾಟಿಸಿದರು. ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಂಗಣ ಉದ್ಘಾಟಿಸಿದರು. ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಅಧ್ಯಕ್ಷತೆ ವಹಿಸಿದರು.

ಲಯನ್ಸ್ ಕ್ಲಬ್ ಉಪಾಧ್ಯಕ್ಷ ಮುಸ್ತಾಕ್ ಅಹಮ್ಮದ್ ಬೆಳ್ವೆ, ಕಾರ್ಯದರ್ಶಿ ನಿವೃತ್ತ ಶಿಕ್ಷಕ ಅಣ್ಣಯ್ಯ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಶೆಟ್ಟಿ ಯಳಂತೂರು, ಸದಸ್ಯ, ಪತ್ರಕರ್ತ ಕೆ.ಸಂಜೀವ ಆರ್ಡಿ, ಮುಖ್ಯ ಶಿಕ್ಷಕಿ ಪ್ರತಿಮಾ, ದೈಹಿಕ ಶಿಕ್ಷಣ ಶಿಕ್ಷಕಿ ಆಶಾಲತಾ ಹೆಗ್ಡೆ, ಸಹ ಶಿಕ್ಷಕರು ಇದ್ದರು. ಶಿಕ್ಷಕ ಜಯಶೀಲ ಶೆಟ್ಟಿ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಪ್ರತಿಮಾ ವಂದಿಸಿದರು. ನಿವೃತ್ತ ಶಿಕ್ಷಕ ಅಣ್ಣಯ್ಯ ಶೆಟ್ಟಿ, ಶಿಕ್ಷಕ ಪ್ರಕಾಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net