Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

ಉಗ್ರಸಂಘಟನೆಗೆ ಸೇರುವ ಕಾಶ್ಮೀರಿ ಯುವಕರ ಸಂಖ್ಯೆಯಲ್ಲಿ ಹೆಚ್ಚಳ

Sunday, 24.12.2017, 5:05 PM       No Comments

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗುವ ಸ್ಥಳೀಯ ಯುವಕರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಈ ವರ್ಷ 100 ಕ್ಕೂ ಹೆಚ್ಚು ಯುವಕರು ಉಗ್ರವಾದದತ್ತ ಮುಖ ಮಾಡಿದ್ದಾರೆ.

2017ರ ನವೆಂಬರ್​ವರೆಗೆ ಕಣಿವೆ ರಾಜ್ಯದಲ್ಲಿ ಒಟ್ಟು 117 ಯುವಕರು ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗಿದ್ದಾರೆ. ಈ ಸಂಖ್ಯೆ ಕಳೆದ ವರ್ಷ 88 ಇತ್ತು. ಡಿಸೆಂಬರ್​ ಅಂತ್ಯದ ವೇಳೆಗೆ ಈ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಬಹುದು. ಯುವಕರು ಹಿಜ್ಬುಲ್​ ಮುಜಾಹಿದೀನ್​ ಮತ್ತು ಲಷ್ಕರ್​ ಎ ತೊಯ್ಬಾ ಉಗ್ರ ಸಂಘಟನೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಭದ್ರತಾ ಪಡೆಗಳು ನೀಡಿರುವ ವರದಿಯಿಂದ ತಿಳಿದು ಬಂದಿದೆ.

ಈ ವರದಿ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ಬಹುತೇಕ ಸಂದರ್ಭಗಳಲ್ಲಿ ಪೋಷಕರು ತಮ್ಮ ಮಕ್ಕಳು ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗಿರುವ ವಿಷಯವನ್ನು ಬಹಿರಂಗ ಪಡಿಸುವುದಿಲ್ಲ. ಹಾಗಾಗಿ ಉಗ್ರ ಸಂಘಟನೆಗೆ ಸೇರ್ಪಡೆಯಾಗುತ್ತಿರುವ ಯುವಕರ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಹೆಚ್ಚು ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top