More

    ಸವಣೂರಿನಲ್ಲಿ ಶೌಚಕ್ಕೆ ಪರದಾಟ

    ಸವಣೂರ: ಪಟ್ಟಣದಲ್ಲಿ ಸುಸಜ್ಜಿತ ಸಾರ್ವಜನಿಕ ಶೌಚಗೃಹಗಳಿಲ್ಲದೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಪರದಾಡುವ ಸ್ಥಿತಿ ನಿರ್ವಣವಾಗಿದೆ.

    60 ಸಾವಿರಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪಟ್ಟಣದಲ್ಲಿ ಕೇವಲ 2 ಸಾರ್ವಜನಿಕ ಶೌಚಗೃಹ ಹಾಗೂ ಒಂದು ಮೂತ್ರಗೃಹ ಮಾತ್ರ ಇದ್ದು, ಅವು ಸಹ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬು ನಾರುತ್ತಿವೆ. ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಕನಿಷ್ಠ ಒಂದು ಮೂತ್ರಗೃಹವೂ ಇಲ್ಲದಿರುವುದು ಪುರಸಭೆ ಆಡಳಿತ ಮತ್ತು ಸ್ವಚ್ಛತೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಕುರಿತು ಸಾರ್ವಜನಿಕರಿಂದ ಅನೇಕ ದೂರುಗಳು ಬಂದರೂ ಪುರಸಭೆ ಮಾತ್ರ ಎಚ್ಚೆತ್ತುಕೊಂಡಿಲ್ಲ.

    ನಿತ್ಯ ಪಟ್ಟಣಕ್ಕೆ ವಿವಿಧ ಕೆಲಸಗಳಿಗಾಗಿ ಬರುವವರ ಸಂಖ್ಯೆ ಹೆಚ್ಚುತ್ತಿದ್ದು, ಸಾರ್ವಜನಿಕರು ಮೂತ್ರ ವಿಸರ್ಜನೆಗಾಗಿ ಅಲೆದಾಡುವಂತಾಗಿದೆ. ಜನಜಂಗುಳಿಯಿಂದ ತುಂಬಿರುವ ಪಟ್ಟಣದ ಮಾರ್ಕೆಟ್ ರಸ್ತೆ, ಅಂಚೆ ಕಚೇರಿ ರಸ್ತೆ, ಪೊಲೀಸ್ ಠಾಣೆ ರಸ್ತೆ ಸೇರಿದಂತೆ ಪ್ರಮುಖ ಕಡೆಗಳಲ್ಲಿ ಸಾರ್ವಜನಿಕ ಶೌಚಗೃಹ ಇಲ್ಲ. ಬಡಾವಣೆಗಳ ಪರಿಸ್ಥಿತಿ ಇದಕ್ಕೆ ಹೊರತಾಗಿಲ್ಲ. ಪುರಸಭೆ 2020-21ರಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಕಂದಾಯ ಇಲಾಖೆ ಕಾಂಪೌಂಡ್​ನಲ್ಲಿ, ಇಂದಿರಾ ಸರ್ಕಲ್ ಸಮೀಪದಲ್ಲಿ ಮತ್ತು ಮೋತಿ ತಲಾಬ ಕೆರೆಯ ಸಮೀಪ ಸೇರಿ ಮೂರು ಕಡೆ ಸಾರ್ವಜನಿಕ ಶೌಚಗೃಹ ನಿರ್ವಿುಸಿದ್ದರೂ ಅವುಗಳನ್ನು ಬಳಕೆಗೆ ನೀಡದಿರುವುದು ವಿಪರ್ಯಾಸ.

    ಪಟ್ಟಣದ ಮಾರುಕಟ್ಟೆಗೆ ಆಗಮಿಸುವ ವೃದ್ಧರು, ಮಕ್ಕಳು, ಮಹಿಳೆಯರಿಗೆ ಸೂಕ್ತ ಶೌಚಗೃಹ ಇಲ್ಲದಿರುವುದು ನಾಚಿಕೆಯ ಸಂಗತಿಯಾಗಿದೆ. ಮಾರುಕಟ್ಟೆಯಲ್ಲಂತೂ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಪುರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    | ಮಂಜುನಾಥ ಕುರಬರ, ಸ್ಥಳೀಯ ನಿವಾಸಿ

    ಪಟ್ಟಣದಲ್ಲಿ ಈ ಮೊದಲು ನಿರ್ವಿುಸಿದ್ದ ಮೂತ್ರಗೃಹ ಅವೈಜ್ಞಾನಿಕ ಹಿನ್ನೆಲೆಯಲ್ಲಿ ನೆಲಸಮಗೊಳಿಸಲಾಗಿದೆ. ಮಾರುಕಟ್ಟೆಯಲ್ಲಿ ಎರಡು ಶೌಚಗೃಹ ಕಾರ್ಯ ನಿರ್ವಹಿಸುತ್ತಿವೆ. ನಿರ್ವಹಣೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇನ್ನು 2-3 ಶೌಚಗೃಹ ನಿರ್ವಣಕ್ಕೆ ಯೋಜನೆ ರೂಪಿಸಲಾಗಿದೆ.

    | ರೇಣುಕಾ ದೇಸಾಯಿ, ಪುರಸಭೆ ಮುಖ್ಯಾಧಿಕಾರಿ ಸವಣೂರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts