ಎನ್‌ಟಿಆರ್‌ಗೆ ಭಾರತ ರತ್ನ ಕೊಡಬೇಕು; ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ನಿರ್ದೇಶಕ ರಾಘವೇಂದ್ರ ರಾವ್

Untitled design - 2023-08-29T145853.693
Published on

ಆಂಧ್ರಪ್ರದೇಶ: ಸೋಮವಾರ (ಆಗಸ್ಟ್​ 28) ಎನ್​ಟಿಆರ್​ ಅವರಿಗೆ ಗೌರವಾರ್ಥವಾಗಿ 100 ರೂ. ಮುಖಬೆಲೆಯ ನಾಣ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅನಾವರಣಗೊಳಿಸಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ನಂದಮೂರಿ ಅವರ ಕುಟುಂಬ ಮತ್ತು ಆಪ್ತರು ಪಾಲ್ಗೊಂಡಿದ್ದರು. ಸದ್ಯ ಇದರ ಬೆನ್ನಲ್ಲೇ ನಿರ್ದೇಶಕ ರಾಘವೇಂದ್ರ ರಾವ್, ಎನ್​ಟಿಆರ್​ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಕೊಡಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.

ಇಂದು (ಆಗಸ್ಟ್​ 29) ಪ್ರಸಿದ್ಧ ನಿರ್ದೇಶಕ ರಾಘವೇಂದ್ರ ರಾವ್ ಅವರು ನಟನ ಕೊಡುಗೆ ಮತ್ತು ಸಾಧನೆಗಳನ್ನು ಗುರುತಿಸಿದ್ದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು. ತದನಂತರ ಎನ್‌ಟಿಆರ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಮನವಿಗೆ ವಿವಿಧ ವಲಯಗಳಿಂದ ಕೂಡ ಸಾಕಷ್ಟು ಬೆಂಬಲ ವ್ಯಕ್ತವಾಗಿದ್ದು, ಅನೇಕರು ಅವಾರ್ಡ್​ ನೀಡುವಂತೆ ಅಭಿಪ್ರಾಯಿಸಿದ್ದಾರೆ. ರಾಘವೇಂದ್ರ ರಾವ್ ಬೇಡಿಕೆಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net