ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನವು 2025ನೇ ಸಾಲಿನಲ್ಲಿ ಕೊಡಮಾಡುವ ‘ಪ್ರೊ. ಎಲ್.ಎಸ್.ಶೇಷಗಿರಿರಾವ್ ವಿಮರ್ಶಾ ಪ್ರಶಸ್ತಿ’ಗೆ ಹಿರಿಯ ವಿಮರ್ಶಕ ಡಾ. ಎಸ್.ಆರ್.ವಿಜಯಶಂಕರ್ ಹಾಗೂ ‘ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಡಾ. ಬಾಬು ಕೃಷ್ಣಮೂರ್ತಿ ಅವರು ಆಯ್ಕೆಯಾಗಿದ್ದಾರೆ.
ಈ ಎರಡೂ ಪ್ರಶಸ್ತಿಯು ತಲಾ 10 ಸಾವಿರ ರೂ. ನಗದು ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. ಫೆ.9ರಂದು ಬಿಎಂಶ್ರೀ ಪ್ರತಿಷ್ಠಾನದಲ್ಲಿ ನಡೆಯಲಿರುವ ಪ್ರೊ. ಎಲ್.ಎಸ್.ಶೇಷಗಿರಿರಾವ್ ಶತಮಾನೋತ್ಸವ ಸಮಾರಂಭದಲ್ಲಿ ಪುರಸ್ಕೃತರಿಗೆ ವಿಮರ್ಶಕ ಡಾ. ಎಚ್.ಎಸ್.ರಾಘವೇಂದ್ರರಾವ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಶಾಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.