ಬೆಳ್ತಂಗಡಿ: ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವು ಅ.3ರಿಂದ ಅ.12ರವರೆಗೆ ನಡೆಯಲಿದೆ. ನವರಾತ್ರಿ ಉತ್ಸವದ ಪ್ರತಿದಿನ ಶ್ರೀ ಕ್ಷೇತ್ರದಲ್ಲಿ ಚಂಡಿಕಾಹೋಮ, ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಅ.12ರಂದು ಸಾರ್ವಜನಿಕ ಚಂಡಿಕಾಹೋಮ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಅ.9ರಂದು ಶ್ರೀ ಶಾರದಾ ಪೂಜೆ, ತೆನೆ ಪೂಜೆ, ಮಧ್ಯಾಹ್ನ ವಿಶೇಷ ಪೂಜೆ ಹಾಗೂ ರಾತ್ರಿ ಹೂವಿನ ಪೂಜೆ, ಅಷ್ಟಾವಧಾನ, ರಂಗಪೂಜೆ, ವಾಹನ ಪೂಜೆ ನಡೆಯಲಿದೆ. ಅ.11ರಂದು ಸಂಜೆ 5 ಗಂಟೆಯಿಂದ ವಾಹನ ಪೂಜೆ, ಶ್ರೀ ಮೂಲದುರ್ಗಾ ದೇವಿಗೆ ರಾತ್ರಿ ಹೂವಿನ ಪೂಜೆ, ರಂಗ ಪೂಜೆ, ಅ.9ರಿಂದ ಅ.11ರವರೆಗೆ ಬೆಳಗ್ಗೆ 9ಗಂಟೆಯಿಂದ 11ರವರೆಗೆ ಅಕ್ಷರಭ್ಯಾಸ ನಡೆಯಲಿದೆ.