

ಬಂಟ್ವಾಳ: ಪರಿಶುದ್ಧ ಮನಸ್ಸಿನಿಂದ ಪ್ರಾರ್ಥಿಸಿದಾಗ ಭಗವಂತನ ಸಾಕ್ಷತ್ಕಾರವಾಗುವುದು. ಮನಸ್ಸು ಶುದ್ಧವಿದ್ದಾಗ ಉತ್ತಮ ಸಮಾಜ ನಿರ್ಮಾಣವಾಗುವುದು. ಮನುಷ್ಯರ ಮಧ್ಯೆ ಪ್ರೀತಿ, ವಿಶ್ವಾಸ, ನಂಬಿಕೆಯೇ ಚಿರಸ್ಥಾಯಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಅಗ್ರಹಾರ ಬೀದಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನವೀಕರಣ, ಬ್ರಹ್ಮಕಲಶೋತ್ಸವ ಹಾಗೂ ನೂತನ ರಥ ಸಮರ್ಪಣೆ ಪ್ರಯುಕ್ತ ಬುಧವಾರ ನಡೆದ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು.
ದೇಗುಲದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ ಅಧ್ಯಕ್ಷತೆ ವಹಿಸಿದ್ದರು. ಗುತ್ತಿಗೆದಾರ ಸೀತಾರಾಮ್ ಸಾಲ್ಯಾನ್ ಅವರನ್ನು ಸನ್ಮಾನಿಸಲಾಯಿತು. ನಾವೂರು ಗ್ರಾಪಂ ಅಧ್ಯಕ್ಷೆ ಇಂದಿರಾ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮಶೇಖರ ಜೈನ್ ಬಲ್ಲೋಡಿಗುತ್ತು, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸತೀಶ್ ಭಂಡಾರಿ ಕುಳತ್ತಬೆಟ್ಟು, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಉದ್ಯಮಿ ವಾಸುದೇವ ಭಟ್ ಕುಂಜಿತ್ತೂಡಿ, ನಾವೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಜೀವನ್ ಶೆಟ್ಟಿ ಭಾಗವಹಿಸಿದ್ದರು. ಅರ್ಚಕ ಸುದರ್ಶನ್ ಬಲ್ಲಾಳ್ ಸ್ವಾಗತಿಸಿದರು. ರಾಜೇಶ್ ಕೊಟ್ಟಾರಿ, ಹರ್ಷರಾಜ್ ನಿರೂಪಿಸಿದರು. ಸದಾನಂದ ಗೌಡ ನಾವೂರು ವಂದಿಸಿದರು.
ದೇವರ ಪ್ರತಿಷ್ಠಾಪನೆ
ಗುರುವಾರ ಬೆಳಗ್ಗೆ ದೇವಸ್ಥಾನದಲ್ಲಿ ಶ್ರೀ ಆಂಜನೇಯ ಹಾಗೂ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾಪನೆ, ಶ್ರೀ ಗೋಪಾಲಕೃಷ್ಣ ದೇವರಿಗೆ ತತ್ಪಹೋಮ, ತತ್ಪಕಲಶಾಭಿಷೇಕ, ಬ್ರಹ್ಮಕಲಶ ಮಂಡಲ, ಬ್ರಹ್ಮರಥ ಸಮರ್ಪಣೆಯ ವೈದಿಕ ವಿಧಿವಿಧಾನಗಳು ಎಡಪದವು ನಾರಾಯಣ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕ ಸುದರ್ಶನ್ ಬಲ್ಲಾಳ್ ಪೌರೋಹಿತ್ಯದಲ್ಲಿ ನೆರವೇರಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸತೀಶ್ ಭಂಡಾರಿ ಕುಳತ್ತಬೆಟ್ಟು, ಅಧ್ಯಕ್ಷ ರಾಕೇಶ್ ಮಲ್ಲಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್, ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಸಂಪತ್ ಕುಮಾರ್ ಶೆಟ್ಟಿ, ಸೀತಾರಾಮ ಸಾಲ್ಯಾನ್ ಬೀದಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಜಯಾನಂದ ಪಿ., ಲೋಕನಾಥ ಶೆಟ್ಟಿ ಪಿ.ಸದಾನಂದ ಹಳೇಗೇಟು ಮೊದಲಾದವರಿದ್ದರು.