More

    ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ 23ಕ್ಕೆ

    ಹುಬ್ಬಳ್ಳಿ : ರಾಜ್ಯ ಸರ್ಕಾರ ಪ್ರತಿ ವರ್ಷದ ಫಾಲ್ಗುಣ ಶುದ್ಧ ತ್ರಯೋದಶಿಯಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸಲು ನಿರ್ಧರಿಸಿದೆ. ಈ ವರ್ಷ ಮಾ. 23ರಂದು ಸರ್ಕಾರ ತಾಲೂಕಾ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಆಚರಿಸುವಂತೆ ಸೂಚಿಸಿದ್ದು, ವೀರಶೈವ ಲಿಂಗಾಯತರು ಸೇರಿದಂತೆ ಸರ್ವರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಜಗದ್ಗುರುಗಳು, ಸರ್ಕಾರದ ಎಲ್ಲ ಇಲಾಖೆಗಳು, ನಿಗಮ, ಮಂಡಳಿಗಳು, ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿ, ತಾಲೂಕು ಆಡಳಿತ, ಜಿಲ್ಲಾ ಆಡಳಿತದಿಂದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts