More

    ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ

    ಕೆ.ಆರ್.ಪೇಟೆ: ತಾಲೂಕಿನ ಹೇಮಾವತಿ ನದಿ ದಂಡೆಯಲ್ಲಿರುವ ಶ್ರೀ ಕ್ಷೇತ್ರ ಹೇಮಗಿರಿ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವವು ಪವಿತ್ರ ರತಸಪ್ತಮಿಯ ದಿನವಾದ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

    ಶಾಸಕ ಎಚ್.ಟಿ.ಮಂಜು, ತಹಸೀಲ್ದಾರ್ ನಿಸರ್ಗ ಪ್ರಿಯಾ ಅವರು ದೇವರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ರಥವನ್ನು ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ದನಗಳ ಜಾತ್ರೆಯಲ್ಲಿ ಉತ್ತಮ ರಾಸುಗಳನ್ನು ಕಟ್ಟಿದ್ದ ರಾಸುಗಳ ಮಾಲೀಕರಿಗೆ ಪ್ರಶಸ್ತಿ ಹಾಗೂ ಬಹುಮಾನವನ್ನು ಶಾಸಕ ಮಂಜು ವಿತರಿಸಿದರು.

    ಶಾಸಕ ಎಚ್.ಟಿ.ಮಂಜು ಮಾತನಾಡಿ, ಐತಿಹಾಸಿಕ ಸ್ಥಳ ಹೇಮಗಿರಿ ಜಾತ್ರೆಗೆ ನಾವು ಚಿಕ್ಕವರಾಗಿದ್ದಾಗ ಬಂದು ಹೋಗುತ್ತಿದ್ದೆವು. ಅದರಲ್ಲೂ ದನಗಳ ಜಾತ್ರೆ ಎಂದರೆ ನಮಗೆ ಎಲ್ಲಿಲ್ಲದ ಪ್ರೀತಿ, ಉತ್ಸಾಹ ಮೂಡಿಬರುತ್ತಿತ್ತು. ದನಗಳ ಜಾತ್ರೆ ಹಾಗೂ ರಥೋತ್ಸವವು ಅದ್ದೂರಿಯಾಗಿ ವಿಜೃಂಭಣೆಯಿಂದ ಆಚರಿಸಲು ಎಲ್ಲರೂ ಸಹಕಾರ ನೀಡಿದ್ದೀರಿ. ಮುಂದೆಯೂ ಅದ್ದೂರಿಯಾಗಿ ಮಾಡಲು ನಿಮ್ಮೆಲ್ಲರ ಸಹಕಾರ ಅತ್ಯಗತ್ಯವಾಗಿದೆ. ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿ ದೇವರ ಕೃಪೆಯಿಂದ ನಾಡು ಬರದಿಂದ ಮುಕ್ತವಾಗಿ ಸಮಯಕ್ಕೆ ಸರಿಯಾಗಿ ಮಳೆ ಬೆಳೆಗಳಾಗಿ ರೈತರು ನೆಮ್ಮದಿಯ ಜೀವನವನ್ನು ನಡೆಸುವ ಸುಸಂದರ್ಭ ಬರಲಿ. ರೈತರು ಚೆನ್ನಾಗಿದ್ದರೆ ಇಡೀ ನಾಡು ಚೆನ್ನಾಗಿರುತ್ತದೆ ಎಂದರು.

    ಜಾತ್ರಾ ಮಹೋತ್ಸವಕ್ಕೆ ಬಂದಿದ್ದ ಮಕ್ಕಳು, ಮಹಿಳೆಯರು, ಯುವಕರು, ಸಾರ್ವಜನಿಕರು ಹಾಗೂ ಭಕ್ತರು ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ರಥಕ್ಕೆ ಹಣ್ಣು-ಜವನ ಎಸೆದು ದೇವರ ಕೃಪೆಗೆ ಪಾತ್ರರಾದರು.

    ಜಿಪಂ ಮಾಜಿ ಸದಸ್ಯ ರಾಮದಾಸ್, ಬಂಡಿಹೊಳೆ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮೀ ಅಣ್ಣಪ್ಪ, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಎಚ್.ಟಿ.ಲೋಕೇಶ್, ಬಲದೇವ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಅಶೋಕ್‌ಕುಮಾರ್, ಆರ್‌ಟಿಒ ಅಧಿಕಾರಿ ಮಲ್ಲಿಕಾರ್ಜುನ್, ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಜ್ಞಾನೇಶ್ ಇತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts