ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಜಾತ್ರೆ ಸಂಪನ್ನ

New Project (2)
Published on

ಬೆಳ್ತಂಗಡಿ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೆ ಮಾರೂರು ಖಂಡಿಗ ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ಬುಧವಾರ ಸಂಪನ್ನಗೊಂಡಿತು. ಮಾ.14ರಂದು ಪೆರಿಂಜೆ ಶ್ರೀ ಪುಷ್ಪ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಾಹ ಪೂಜೆ, ರಾತ್ರಿ ಪಡ್ಡ್ಯೋಡಿಗುತ್ತಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವುದು,ಪಡ್ಡ್ಯಾರ ಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು, ಮಾ.15ರಂದು ಭೂತ ಬಲಿ ಉತ್ಸವ, ಮಾ.16ರಂದು ಅಂಬೋಡಿ, ಬಲಿ, ಉತ್ಸವ, ಹೂವಿನ ಪೂಜೆ, ರಥಾರೋಹಣ ಕಾರ್ಯಕ್ರಮಗಳು ಜರಗಿದವು.

17ರಂದು ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ, ಮಹಾಅನ್ನಸಂತರ್ಪಣೆ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ, 18ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ, ಪಡ್ಡ್ಯೋಡಿಗುತ್ತಿಗೆ ಭಂಡಾರ ಹಿಂದಿರುಗುವುದು, 19ರಂದು ರಾತ್ರಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುತಂಬಿಲ ಸೇವೆ, ತುಲಾಭಾರ ಸೇವೆ ಹಾಗೂ ಇನ್ನಿತರ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದ ಆನುವಂಶಿಕ ಆಡಳಿತದಾರ ಎ.ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿ, ವಿಕಾಸ್ ಜೈನ್, ವಿಶ್ವಾಸ್ ಜೈನ್ ಹಾಗೂ ಭಕ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net