More

    13ರಿಂದ ಶ್ರೀ ಕುಮಾರಲಿಂಗೇಶ್ವರಸ್ವಾಮಿ ಜಾತ್ರೋತ್ಸವ

    ಸೋಮವಾರಪೇಟೆ: ಧಾರ್ಮಿಕ ಹಿನ್ನೆಲೆಯುಳ್ಳ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರೋತ್ಸವವನ್ನು ಜ.13ರಿಂದ 17ರವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಶ್ರೀ ಕುಮಾರಲಿಂಗೇಶ್ವರ ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ.ಲೋಕೇಶ್ ಹೇಳಿದರು.

    ಜ.16 ರಂದು ಮಧ್ಯಾಹ್ನ 12ಕ್ಕೆ ಮಹಾರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    13ರಂದು ಬೆಳ್ಳಿ, ಬಂಗಾರ ದಿನ ಆಚರಣೆಯೊಂದಿಗೆ ಸಂಜೆ 6.30ರಿಂದ ಜಾತ್ರೆ ಪ್ರಾರಂಭೋತ್ಸವ ಪೂಜೆ ನಡೆಯಲಿದೆ. 14ರಂದು ಮಕರ ಸಂಕ್ರಮಣ ಕರುವಿನ ಹಬ್ಬ ಹಾಗೂ 7 ಗಂಟೆಗೆ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ ನಂದಾದೀಪವನ್ನು ಬೆಳಗಿಸಲಾಗುತ್ತದೆ. ಕುಮಾರಳ್ಳಿ, ಜಕ್ಕನಳ್ಳಿ, ಕೊತ್ತನಳ್ಳಿ ಗ್ರಾಮಸ್ಥರು ಮತ್ತು ದೇವರ ಒಡೆಕಾರರು ಮತ್ತು ಭಕ್ತಾದಿಗಳು ಪುಷ್ಪಗಿರಿ ಬೆಟ್ಟದಲ್ಲಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿಯ ಪಾದುಕೆಗಳಿಗೆ ಪೂಜೆ ಸಲ್ಲಿಸಿ ಜ್ಯೋತಿ ಬೆಳಗಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

    15ರಂದು ಅರಸು ಬಲ ಸೇವೆ ಪೂಜೆ ನಡೆಯಲಿದೆ. 16ರ ರಥೋತ್ಸವದಂದು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಾಸಕ ಡಾ. ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸಚಿವ ಅಪ್ಪಚ್ಚು ರಂಜನ್, ಉದ್ಯಮಿ ಹರಪಳ್ಳಿ ರವೀಂದ್ರ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದರು.

    17ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸ್ಥಳೀಯರಾದ ಎಸ್.ಜಿ.ಮೇದಪ್ಪ, ಕೆ.ಎಸ್. ರಾಮಚಂದ್ರ, ಉದ್ಯಮಿ ಬಿ.ಎಲ್ ಸಂತೋಷ್, ಕೆ.ಎಂ. ಕೃಷ್ಣಕುಮಾರ್, ಕೆ.ಕೆ. ಗೋಪಾಲ, ವಕೀಲರಾದ ಬಿ.ಈ. ಜಯೇಂದ್ರ, ಶಾಂತಳ್ಳಿ ಗ್ರಾ.ಪಂ ಅಧ್ಯಕ್ಷೆ ಸವಿತಾ ವಿಜಯ, ಬೆಟ್ಟದಳ್ಳಿ ಗ್ರಾ.ಪಂ. ಅಧ್ಯಕ್ಷ ಕೆ.ಜಿ. ತಮ್ಮಯ್ಯ, ತೋಳೂರುಶೆಟ್ಟಳ್ಳಿ ಗ್ರಾ.ಪಂ. ಅಧ್ಯಕ್ಷೆ ಭವಾನಿ ಮಂಜುನಾಥ್, ಶಾಂತಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎಂ. ಧರ್ಮಪ್ಪ, ಶ್ರೀ ಕುಮಾರಲಿಂಗೇಶ್ವರ ಯುವಕ ಸಂಘದ ಅಧ್ಯಕ್ಷ ಜಿ.ಎಂ. ಸಜ್ಜನ್ ಉಪಸ್ಥಿತರಿರುವರು. ಮುಖ್ಯ ಭಾಷಣಕಾರರಾಗಿ ಪಶುವೈದ್ಯ ಶಾಲೆಯ ಸಹಾಯಕ ನಿರ್ದೇಶಕ ಬದಾಮಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

    ಕೆಎಸ್‌ಆರ್‌ಟಿಸಿಯ ನಿವೃತ್ತ ಡಿಸಿಎಂ ಕೆ.ಎಂ.ರವೀಂದ್ರ, ಸಮಾಜ ಸೇವಕ ಬಿ.ಬಿ. ನವೀನ್ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಅಂಕಗಳಿಸಿದ ತಲ್ತಾರೆಶೆಟ್ಟಳ್ಳಿ ಗ್ರಾಮದ ಕೆ.ಎ.ಅನನ್ಯ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

    ದೇವಾಲಯ ಧರ್ಮದರ್ಶಿ ಮಂಡಳಿ ಉಪಾಧ್ಯಕ್ಷ ಜಿ.ಡಿ. ಬಸವರಾಜು, ಪ್ರಧಾನ ಕಾರ್ಯದರ್ಶಿ ಕೆ.ಕೆ. ಮುತ್ತಣ್ಣ, ಖಜಾಂಚಿ ಎಸ್.ಆರ್. ಉತ್ತಯ್ಯ, ದೇವಾಲಯ ಕಾರ್ಯದರ್ಶಿ ಕೆ.ಪಿ. ಚಂಗಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts