

Asia Cup: ದುಬೈನಲ್ಲಿ ನಡೆಯುತ್ತಿರುವ ಭಾರತದ ಅಂತಿಮ ಸೂಪರ್-4 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಅಭಿಷೇಕ್ ಶರ್ಮ 31 ಎಸೆತಗಳಲ್ಲಿ 61 ರನ್ ಗಳಿಸುವ ಮೂಲಕ ಏಷ್ಯಾಕಪ್ ಟಿ20 ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 300 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಸೂಪರ್- 4 ಹಂತದಲ್ಲಿ ಇದು ಅಭಿಷೇಕ್ ಅವರ ಸತತ ಮೂರನೇ ಅರ್ಧಶತಕವಾಗಿದ್ದು, ಇದಕ್ಕೂ ಮೊದಲು ಸೆ.21ರಂದು ನಡೆದ ಪಾಕಿಸ್ತಾನ ವಿರುದ್ಧ ಭಾರತವನ್ನು 172 ರನ್‌ಗಳ ಸುಲಭ ಗುರಿ ತಲುಪಲು ಅವರು 39 ಎಸೆತಗಳಲ್ಲಿ 74 ರನ್ ಗಳಿಸಿದ್ದರು ಮತ್ತು ಬುಧವಾರ ಬಾಂಗ್ಲಾದೇಶ ವಿರುದ್ಧ ಕೇವಲ 37 ಎಸೆತಗಳಲ್ಲಿ 75 ರನ್ ಗಳಿಸಿದರು.
ಟಿ20 ಏಷ್ಯಾಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೊಹಮ್ಮದ್ ರಿಜ್ವಾನ್ ಅವರ ದಾಖಲೆಯನ್ನು ಶರ್ಮ ಇದೀಗ ಮುರಿದರು. ಟಿ-20 ಐ ತಂಡದಿಂದ ಹೊರಗುಳಿದಿರುವ ಪಾಕಿಸ್ತಾನ ವಿಕೆಟ್ ಕೀಪರ್ ಮೊಹಮ್ಮದ್ ರಿಜ್ವಾನ್, 2022ರ ಟೂರ್ನಿಯ ಆವೃತ್ತಿಯಲ್ಲಿ ಆರು ಪಂದ್ಯಗಳಲ್ಲಿ 281 ರನ್‌ಗಳ ಹಿಂದಿನ ದಾಖಲೆಯನ್ನು ಹೊಂದಿದ್ದರು.
ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ಗಲ್ಲಿ 5 ವಿಕೆಟ್ ಕಳೆದುಕೊಂಡು 202 ರನ್‌ಗಳ ಬೃಹತ್ ಮೊತ್ತವನ್ನು ಕಲೆ ಹಾಕಿದೆ.(202/5)