More

    ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ; ಸೆಂಟ್ರಲ್​ ಬ್ಯಾಂಕ್​ ಗವರ್ನರ್​ ರಾಜೀನಾಮೆ!

    ಕೊಲಂಬೊ: ಶ್ರೀಲಂಕಾದಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಸೆಂಟ್ರಲ್ ಬ್ಯಾಂಕ್​ ಗವರ್ನರ್​ ಅಜಿತ್​ ನಿವಾರ್ಡ್​ ಕ್ಯಾಬ್ರಾಲ್​ ರಾಜೀನಾಮೆ ನೀಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರದ ಎಲ್ಲಾ ಸಚಿವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸೆಂಟ್ರಲ್​ ಬ್ಯಾಂಕ್​ ಗವರ್ನರ್​ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

    ಈ ಬೆನ್ನಲ್ಲೇ ಪ್ರಧಾನಮಂತ್ರಿ ಮಹಿಂದಾ ರಾಜಪಕ್ಸ ಹೊರತುಪಡಿಸಿ ಸಂಪುಟದ ಎಲ್ಲಾ 26 ಸಚಿವರು ಭಾನುವಾರ ರಾತ್ರಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸ ಅವರ ಪುತ್ರ ನಮಲ್ ರಾಜಪಕ್ಸ ಕೂಡ ಸೇರಿದ್ದಾರೆ. ಇದೀಗ ಕೇಂದ್ರ ಬ್ಯಾಂಕ್​ ಗವರ್ನರ್​ ಕೂಡ ರಾಜೀನಾಮೆ ನೀಡಿದ್ದಾರೆ.

    ಮುಳ್ಳಿನ ರಾಶಿ ಮೇಲೆ ಕುಣಿದು ಕುಪ್ಪಳಿಸಿದ್ರು ಅಪ್ಪು ಅಭಿಮಾನಿಗಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts