More

    ಆರ್‌ಸಿಬಿ ತೆಕ್ಕೆಗೆ ಶ್ರೀಲಂಕಾದ ಆಲ್ರೌಂಡರ್ ಲೆಗ್‌ಸ್ಪಿನ್ನರ್ ವಹಿಂದು ಹಸರಂಗ ?

    ನವದೆಹಲಿ: 14ನೇ ಆವೃತ್ತಿಯ 2ನೇ ಭಾಗದ ಆರಂಭಕ್ಕೆ ದಿನಗಣನೆ ಆರಂಭಗೊಂಡಿದೆ. ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ಟೂರ್ನಿಯ ಉಳಿದ 31 ಪಂದ್ಯಗಳು ನಡೆಯಲಿವೆ. ಈ ಬಾರಿ ಆರ್‌ಸಿಬಿ ತಂಡ ಸ್ಪಿನ್ನರ್‌ಗಳಾದ ವಾಷಿಂಗ್ಟನ್ ಸುಂದರ್ ಹಾಗೂ ಆಸ್ಟ್ರೇಲಿಯಾದ ಆಡಂ ಜಂಪಾ ಅವರುಗಳ ಸೇವೆಯನ್ನು ಕಳೆದುಕೊಳ್ಳಲಿದೆ. ಇದೀಗ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆಡಂ ಜಂಪಾ ಬದಲಿಗೆ ಶ್ರೀಲಂಕಾದ ಲೆಗ್ ಸ್ಪಿನ್ನರ್ ವನಿಂದು ಹಸರಂಗ ಆಯ್ಕೆಯಾಗುವ ಸಾಧ್ಯತೆಗಳಿವೆ. ಗುರುವಾರ ಮುಕ್ತಾಯಗೊಂಡ ಭಾರತ ವಿರುದ್ಧದ ನಿಗದಿತ ಓವರ್‌ಗಳ ಸರಣಿಯಲ್ಲಿ ಹಸರಂಗ ಗಮನಾರ್ಹ ನಿರ್ವಹಣೆ ತೋರಿದ್ದರು.

    ಇದನ್ನೂ ಓದಿ: ಅಮೆರಿಕದ ಸ್ಟಾರ್ ಅಥ್ಲೀಟ್ ಆಸೆಯನ್ನು ಭಗ್ನಗೊಳಿಸಿದ ಕರೊನಾ.

    ಭಾರತ ವಿರುದ್ಧದ ಟಿ20 ಸರಣಿಯಲ್ಲಿ 3 ಪಂದ್ಯಗಳಿಂದ 7 ವಿಕೆಟ್ ಕಬಳಿಸಿದ್ದ ಹಸರಂಗ ಸರಣಿ ಶ್ರೇಷ್ಠ ಪ್ರಶಸ್ತಿ ದಕ್ಕಿಸಿಕೊಂಡಿದ್ದರು. ಇದರಿಂದ ಐಪಿಎಲ್ ಫ್ರಾಂಚೈಸಿಗಳ ಗಮನಸೆಳೆಯಲು ಯಶಸ್ವಿಯಾಗಿದ್ದಾರೆ. ಆರ್‌ಸಿಬಿ ಸೇರಿದಂತೆ ಮೂರ್ನಾಲ್ಕು ತಂಡಗಳು ಹಸರಂಗ ಕೊಂಡುಕೊಳ್ಳಲು ಆಸಕ್ತಿ ವಹಿಸಿವೆ ಎನ್ನಲಾಗಿದೆ. ಪ್ರಮುಖವಾಗಿ ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಹಸರಂಗ ಕೊಂಡುಕೊಳ್ಳಲು ಮುಂದೆ ಬಂದಿವೆ ಎನ್ನಲಾಗಿದೆ.

    ಇದನ್ನೂ ಓದಿ: ಒಲಿಂಪಿಕ್ಸ್ ರೋಯಿಂಗ್‌ನಲ್ಲಿ ಕೊವ್ರೇಷಿಯಾ ಸಹೋದರರ ಅಪರೂಪದ ಸಾಧನೆ,

    ಏಪ್ರಿಲ್-ಮೇ ತಿಂಗಳಲ್ಲಿ ನಿಗದಿಯಾಗಿದ್ದ ಐಪಿಎಲ್‌ನಲ್ಲಿ ಕೋವಿಡ್-19 ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಲೀಗ್ ಮುಂದೂಡಲಾಗಿತ್ತು. ಇದೀಗ ಸೆಪ್ಟೆಂಬರ್ 19ರಿಂದ ಯುಎಇಯ ದುಬೈ, ಶಾರ್ಜಾ ಹಾಗೂ ಅಬುಧಾಬಿಯಲ್ಲಿ 31 ಪಂದ್ಯಗಳು ನಡೆಯಲಿವೆ. ಇದಕ್ಕೂ ಮೊದಲು ಭಾರತ ತಂಡ, ಇಂಗ್ಲೆಂಡ್ ಎದುರು ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

    ಭಾರತ ಎದುರು ಮೊದಲ ಟಿ20 ಸರಣಿ ಜಯಿಸಿದ ಶ್ರೀಲಂಕಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts