18ರಂದು ಪಡುಕುತ್ಯಾರಿನಲ್ಲಿ ಶ್ರೀ ಮಹಾಗಣಪತಿ ಯಾಗ

ganapathi
Published on

ಪಡುಬಿದ್ರಿ: ಕಟಪಾಡಿ ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಚಾತುರ್ಮಾಸ್ಯ ಮಹೋತ್ಸವ ಅಂಗವಾಗಿ ಪಡುಕುತ್ಯಾರು ಶ್ರೀ ಸರಸ್ವತಿ ಪೂರ್ವ ಛಾತ್ರ ಸಂಘ ಹಾಗೂ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಆಯೋಜನೆಯಲ್ಲಿ ದಶ ಸಹಸ್ರ ಮೋದಕ ಶ್ರೀ ಮಹಾಗಣಪತಿಯಾಗ ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಆ.18ರಂದು ನಡೆಯಲಿದೆ. ಬೆಳಗ್ಗೆ 6 ಗಂಟೆಗೆ ಯಾಗಸಂಕಲ್ಪ, ಮಧ್ಯಾಹ್ನ 12ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಆಶೀರ್ವಚನ ನೀಡುವರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಹಾಗೂ ಆನೆಗುಂದಿ ಪ್ರತಿಷ್ಠಾನ ಕಟಪಾಡಿ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರ ಹೋಬಳಿ ಅಧ್ಯಕ್ಷತೆ ವಹಿಸುವರು. ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಧರ್ಮದರ್ಶಿ ಬಾಲಚಂದ್ರ ಭಟ್ಟ ವಿಶೇಷ ಉಪನ್ಯಾಸ ನೀಡುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net