More

    ರಾಜೇಶ್​ ಕೃಷ್ಣನ್​, ಕುಮಾರ್​ ಗೋವಿಂದ್​, ಶ್ರೀನಿವಾಸಮೂರ್ತಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

    ಬೆಂಗಳೂರು: ಕನ್ನಡ ಚಿತ್ರರಂಗದ ಮೊದಲ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷಗಳಾದ ಹಿನ್ನೆಲೆಯಲ್ಲಿ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿಯನ್ನು ಸ್ಥಾಪಿಸಿದ್ದರು. ಈಗ ಪ್ರಶಸ್ತಿ ಪ್ರದಾನ ಸಮಾರಂಭವು 22ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಬಾರಿ ಹಿರಿಯ ನಟ ಶ್ರೀನಿವಾಸಮೂರ್ತಿ, ನಿರ್ದೇಶಕ ಸಾಯಿಪ್ರಕಾಶ್​, ಗಾಯಕ ರಾಜೇಶ್​ ಕೃಷ್ಣನ್​ ಮುಂತಾದವರಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

    ಇದನ್ನೂ ಓದಿ: ಇನ್ನೊಂದು ಚಿತ್ರದಲ್ಲಿ ಮಂಡ್ಯ ರಮೇಶ್​ ಮಗಳು ದಿಶಾ … ಯಾವುದು ಗೊತ್ತಾ?

    ಡಿ.ವಿ, ಸುಧೀಂದ್ರ ಅವರು ಪ್ರಾರಂಭಿಸಿದ ಈ ಸಂಪ್ರದಾಯವನ್ನು ಅವರ ನಿಧನದ ನಂತರ ಅವರ ಸಂಬಂಧಿ ಸುಧೀಂದ್ರ ವೆಂಕಟೇಶ್​ ಮುಂದುವರೆಸಿಕೊಂಡು ಬಂದಿದ್ದು, ಈ ವರ್ಷ ಸುಧೀಂದ್ರ ಅವರ ಜನ್ಮದಿನದಂದು (ಜನವರಿ 25), ಈ ಸಮಾರಂಭವನ್ನು ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ಸಂಜೆ 5ಕ್ಕೆ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಸಂಸ್ಥೆಯ 47ನೇ ವಾರ್ಷಿಕೋತ್ಸವ ಹಾಗೂ 21 ಮತ್ತು 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲು ತೀರ್ಮಾನಿಸಲಾಗಿದೆ.

    22 ವರ್ಷಗಳ ಹಿಂದೆ ಕೇವಲ ಎರಡು ಪ್ರಶಸ್ತಿಗಳಿಂದ ಪ್ರಾರಂಭವಾದ ಈ ಸಮಾರಂಭಕ್ಕೆ ಆಗಮಿಸಿದ ಗಣ್ಯರು, ಈ ಸಂಸ್ಥೆಯ ಮೂಲಕ ಪ್ರಶಸ್ತಿ ಪ್ರದಾನ ಮಾಡಲು ಮುಂದಾಗಿದ್ದರು. ಹೀಗೆ ಆರಂಭವಾದ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲೀಗ 11 ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಸೀಮಿತವಾಗದೆ ಕನ್ನಡ ಚಿತ್ರರಂಗಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಿರುವ ಕಲಾವಿದರು ಮತ್ತು ತಂತ್ರಜ್ನರಿಗೆ ಪ್ರಶಸ್ತಿ ನೀಡಲಾಗುತ್ತಿದೆ.

    ಇದನ್ನೂ ಓದಿ: ಮೂರು ದಶಕಗಳ ವೈರತ್ವಕ್ಕೆ ತಾರಕ್​ ಮತ್ತು ರಾಮ್​ಚರಣ್​ ಅಂತ್ಯ ಹಾಡಿದ್ದು ಹೇಗೆ?

    ಈ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್​ ಬಣಕಾರ್​, ನಟಿಯರಾದ ರಾಗಿಣಿ, ‘ಎ’ ಖ್ಯಾತಿಯ ಚಾಂದಿನಿ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಮುಖ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ಪ್ರಶಸ್ತಿಗಳ ವಿವರ

    2021

    ಪಿ. ಧನರಾಜ್ – ಹಿರಿಯ ಚಲನಚಿತ್ರ ನಿರ್ಮಾಪಕರು – ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

    ಈಶ್ಚರ ದೈತೋಟ – ಹಿರಿಯ ಪತ್ರಕರ್ತರು – ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

    2022

    ಕುಮಾರ್ ಗೋವಿಂದ್ – ಹಿರಿಯ ನಟ-ನಿರ್ಮಾಪಕರು – ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

    ಸದಾಶಿವ ಶೆಣೈ – ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು – ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

    ರಾಜೇಶ್ ಕೃಷ್ಣನ್ – ಡಾ. ರಾಜಕುಮಾರ್ ಪ್ರಶಸ್ತಿ, ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ

    ಸಾಯಿಪ್ರಕಾಶ್ – ‘ಯಜಮಾನ’ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ, ಭಾರತಿ ವಿಷ್ಣುವರ್ಧನ್​ ಅವರಿಂದ

    ಶ್ರೀಮತಿ ತುಳಸಿ – ಹಿರಿಯ ಪೋಷಕ ನಟಿ, ಡಾ. ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ

    ನೋಬಿನ್ ಪಾಲ್ – ಅತ್ಯುತ್ತಮ ಸಂಗೀತ ನಿರ್ದೇಶನ, ‘777 ಚಾರ್ಲಿ’ ಚಿತ್ರಕ್ಕಾಗಿ – ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್​ಟೈನ್​ಮೆಂಟ್​ ಪ್ರೈ ಲಿ ಪ್ರಶಸ್ತಿ

    ಮಧುಚಂದ್ರ – ಅತ್ಯುತ್ತಮ ಕಥಾಲೇಖಕರು, ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರಕ್ಕಾಗಿ ಕೆ.ವಿ. ಜಯರಾಂ ಪ್ರಶಸ್ತಿ

    ಎಂ.ಜಿ. ಶ್ರೀನಿವಾಸ್ (ಶ್ರೀನಿ) – ಅತ್ಯುತ್ತಮ ಸಂಭಾಷಣೆ, ‘ಓಲ್ಡ್ ಮಾಂಕ್’ ಚಿತ್ರಕ್ಕಾಗಿ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ, ಡಾ.ಎಚ್​.ಕೆ. ನರಹರಿ ಅವರಿಂದ

    ಕಿರಣ್ ರಾಜ್ (‘777 ಚಾರ್ಲಿ’) – ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ ಬಿ. ಸುರೇಶ ಪ್ರಶಸ್ತಿ

    ಪ್ರಮೋದ್ ಮರವಂತೆ – ‘ಕಾಂತಾರ’ ಚಿತ್ರದ ‘ಸಿಂಗಾರ ಸಿರಿಯೇ …’ ಗೀತರಚನೆಗಾಗಿ – ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಶ್ರೀ ವಿನಾಯಕರಾಮ್ ಕಲಗಾರು ಅವರಿಂದ

    ಶ್ರೀನಿವಾಸಮೂರ್ತಿ – ಹಿರಿಯ ಪೋಷಕ ಕಲಾವಿದರು, ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ, ಶ್ರೀಮತಿ ನಾಗಮಣಿ ಸೀತಾರಾಂ ಕುಟುಂಬದವರಿಂದ

    ತಮಿಳಿಗೆ ರಕ್ಷಿತ್​ ಶೆಟ್ಟಿ? ವಿಜಯ್​ ಚಿತ್ರದಲ್ಲಿ ನಟನೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts