ಶ್ರೀ ರಾಜಗುಳಿಗ ಸಾನ್ನಿಧ್ಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ

25
Published on

ಕಡಬ: ಪೆರುವಾಜೆ-ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನ್ನಿಧ್ಯದ ಪ್ರತಿಷ್ಠಾಪನಾ ದಿನ ಹಾಗೂ ದೈವದ ಕೋಲ ಭಾನುವಾರ ನಡೆಯಿತು. ಬೆಳಗ್ಗೆ ದೇವತಾ ಪ್ರಾರ್ಥನೆ, ಸ್ಥಳ ಶುದ್ಧಿ, ಶ್ರೀ ಮಹಾಗಣಪತಿ ಹೋಮ ನಡೆಯಿತು. ಸಾಯಂಕಾಲ ಶ್ರೀರಾಜಗುಳಿಗ ದೈವದ ನರ್ತನ ಸೇವೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ, ಮೊಕ್ತೇಸರ ಅರುಣ್ ಕುಮಾರ್ ರೈ ನಳೀಲು, ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ನಿರಂಜನ್ ರೈ ಪಾಲ್ತಾಡು, ಚೆನ್ನಾವರ ಉಳ್ಳಾಕುಲು ದೈವಸ್ಥಾನದ ಕಾರ್ಯದರ್ಶಿ ದೀಕ್ಷಿತ್ ಜೈನ್, ಶ್ರೀ ರಾಜಗುಳಿಗ ಸೇವಾ ಸಮಿತಿಯ ಗೌರವಾಧ್ಯಕ್ಷ ಪಿ.ಮಂಜಪ್ಪ ರೈ, ಕಾರ್ಯಾಧ್ಯಕ್ಷ ದೇವರಾಜ ಆಳ್ವ, ಅಧ್ಯಕ್ಷ ಡಾ.ಹರಿಕೃಷ್ಣ ರೈ ಜಿ.ಎನ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ, ಉಪಾಧ್ಯಕ್ಷ ಸುಧಾಮ ಮಣಿಯಾಣಿ, ಸುಂದರ ನಾಯ್ಕ, ಜತೆ ಕಾರ್ಯದರ್ಶಿಗಳಾದ ದಿನೇಶ್ ಶಾಂತಿಮೂಲೆ, ಶಶಿಕುಮಾರ್, ಕೋಶಾಧಿಕಾರಿ ಬಾಬು ನಾಯ್ಕ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net