More

    ನೇಹಾ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಲು ಶ್ರೀರಂಭಾಪುರಿ ಜಗದ್ಗುರುಗಳ ಒತ್ತಾಯ

    ಹುಬ್ಬಳ್ಳಿ: ಇತ್ತೀಚೆಗೆ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಾಳೆಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಒತ್ತಾಯಿಸಿದ್ದಾರೆ. ನೇಹಾ ಹಿರೇಮಠ್ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಮಾದ್ಯಮಗಳೊಂದಿ ಅವರು ಮಾತನಾಡಿದರು.
    ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ್ ಅವರ ಜನಾನುರಾಗಿ ವ್ಯಕ್ತಿತ್ವಕ್ಕೆ ಹಿನ್ನೆಡೆಯನ್ನು ಉಂಟು ಮಾಡುವ ಪಿತೂರಿ ಈ ಕೊಲೆ ಪ್ರಕರಣದ ಹಿಂದಿರುವಂತಿದೆ. ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದು, ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುವ ಸಿಐಡಿ ತನಿಖೆಯಿಂದ ಸತ್ಯಾಂಶ ಹೊರಬರುವ ವಿಶ್ವಾಸವಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಶ್ರೀರಂಭಾಪುರಿ ಜಗದ್ಗುರುಗಳು ಆಗ್ರಹಿಸಿದ್ದಾರೆ.

    ಕಾಲೇಜಿಗೆ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿನಿಯನ್ನು ಹಾಡಹಗಲೇ ಭೀಕರವಾಗಿ ಕೊಲೆಗೈದ ವ್ಯಕ್ತಿಯನ್ನು ಗಲ್ಲುಶಿಕ್ಷೆಗೆ ಒಳಪಡಿಸಬೇಕು. ಸರ್ಕಾರವೇ ಆಗಲಿ ಯಾವುದೇ ರಾಜಕೀಯ ನಾಯಕರೇ ಆಗಲಿ ಇಂತಹ ಪ್ರಕರಣಗಳಲ್ಲಿ ರಾಜಕೀಯವನ್ನು ಮಾಡಬಾರದು. ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವು ನಾಯಕರು ನೇಹಾ ಪೋಷಕರಿಗೆ ಸಾಂತ್ವಾನ ಹೇಳಿದ್ದಾರೆ. ಈ ನಡುವೆ ಯಾವುದೋ ಒಂದು ಸಮುದಾಯವನ್ನು ತುಷ್ಠೀಕರಿಸಲು ಹೇಳಿಕೆಗಳನ್ನು ನೀಡಬಾರದು. ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಸೇರಿ ಈ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಒಂದು ವೇಳೆ ನ್ಯಾಯ ಸಿಗದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಹುಕ್ಕೇರಿ ಹಿರೇಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts