ಬೆಂಗಳೂರು: ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನದ ಜಗದ್ಗುರು ಡಾ. ವೀರಸೋಮೇಶ್ವರ ಭಗವತ್ಪಾದ ಶ್ರೀಗಳು 21 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಶ್ರೀಗಳು ದೇಣಿಗೆಯ ಚೆಕ್ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಶ್ರೀಗಳು ಶಾಲು ಹೊದಿಸಿ ಸನ್ಮಾನಿಸಿದರು. ನಂತರ ಸ್ವಲ್ಪ ವೇಳೆ ಮಾತುಕತೆ ನಡೆಸಿದರು.
ರಾಜ್ಯದಲ್ಲಿ ಕರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿರುವುದರಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆಯನ್ನು ನೀಡುವಂತೆ ಸರ್ಕಾರ ಕೋರಿತ್ತು. ಈ ಹಿನ್ನೆಲೆಯಲ್ಲಿ ರಂಭಾಪುರಿ ಶ್ರೀಗಳ ಸಲಹೆಯಂತೆ ಶ್ರೀ ಜಗದ್ಗುರು ರೇಣುಕಾಚಾರ್ಯ ಕಾಲೇಜು ವತಿಯಿಂದ ಈ ದೇಣಿಗೆ ನೀಡಲಾಗಿದೆ. ಈ ಕಾಲೇಜಿಗೆ ಶ್ರೀಗಳು ಮಹಾಪೋಷಕರಾಗಿದ್ದಾರೆ.
ಬಸವಣ್ಣನವರ ಘನ ವ್ಯಕ್ತಿತ್ವ: ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು