ತುಮಕೂರು: ಕರ್ನಾಟಕದ ಉತ್ಸವ ಮೂರ್ತಿ ಬಿ.ಎಸ್. ಯಡಿಯೂರಪ್ಪ. ಗರ್ಭಗುಡಿಯಲ್ಲಿರುವ ಮೂರ್ತಿ ಸಿಎಂ ಬಸವರಾಜ ಬೊಮ್ಮಾಯಿ ಎಂದು ತರಳಬಾಳು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಿಪಟೂರಿನಲ್ಲಿ ಶ್ರೀ ಗುರು ಸಿದ್ದರಾಮೇಶ್ವರ 850ನೇ ಜಯಂತ್ಯುತ್ಸವದ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಕಾಯಕಯೋಗಿ ಸಿದ್ದರಾಮೇಶ್ವರ ಈ ನಾಡಿನ ಮೊದಲ ನೀರಾವರಿ ಹರಿಕಾರ. ಅದೇರೀತಿ ರಾಜ್ಯದಲ್ಲಿ ಸಾಕಷ್ಟು ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿದವರು ಯಡಿಯೂರಪ್ಪ ಎಂದು ಬಣ್ಣಿಸಿದರು.
ಕೃಷಿಭೂಮಿಯನ್ನು ಕೈಗಾರಿಕೆಗೆ ವಶ ಪಡಿಸಿಕೊಂಡ ಬಳಿಕ ಆ ಭೂಮಿಯ ಮಾಲೀಕತ್ವ ರೈತನ ಹೆಸರಲ್ಲೇ ಇರಬೇಕು. ಅಂತಹ ಕಾನೂನನ್ನು ರಾಜ್ಯ ಸರ್ಕಾರ ತರಬೇಕು ಎಂದು ಶ್ರೀಗಳು ಒತ್ತಾಯಿಸಿದರು.
ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು