More

    ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನಕ್ಕೆ ಹೊರೆಕಾಣಿಕೆ

    ಮಂಗಳೂರು: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಮೇ 14ರಿಂದ 25ವರೆಗೆ ಪುನಃ ಪ್ರತಿಷ್ಠಾಪನಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜರುಗಲಿದ್ದು, ಈ ಹಿನ್ನೆಲೆಯಲ್ಲಿ ಭಾನುವಾರ ಕದ್ರಿ ಶ್ರೀ ಮಂಜುನಾಥೇಶ್ವರ ಕ್ಷೇತ್ರದಿಂದ ಬೃಹತ್ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು.


    ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿಯವರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ರಾಜ್ಯದ ವಿವಿಧ ಕಡೆಗಳಿಂದ ಹೊರೆ ಕಾಣಿಕೆ ಹೊತ್ತ ವಾಹನಗಳು ಕದ್ರಿ ದೇವಳದ ಎದುರಿನಿಂದ ಸರತಿ ಸಾಲಿನಲ್ಲಿ ಸಾಗಿದವು. ಮಲ್ಲಿಕಟ್ಟೆ- ನಂತೂರು ಜಂಕ್ಷನ್ ಮೂಲಕ ಶ್ರೀ ಕ್ಷೇತ್ರಕ್ಕೆ ಹೊರೆಕಾಣಿಕೆಯ ಬೃಹತ್ ಮೆರವಣಿಗೆ ನಡೆಯಿತು.


    ಮೆರವಣಿಗೆಯಲ್ಲಿ ಆಕರ್ಷಕ ಟ್ಯಾಬ್ಲೋಗಳು, ಚೆಂಡೆ ವಾದಕಗಳು, ಬರ್ಕೆ ಹುಲಿವೇಷ, ಕುಣಿತ ಭಜನೆ, ಗೊಂಬೆಕುಣಿತ, ತಾಲೀಮು ಮೆರವಣಿಗೆಗೆ ಮೆರುಗು ನೀಡಿದವು. ಮುಂಬೈ, ಪೂನಾ, ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಿಂದ ಭಕ್ತಾಧಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.


    ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮಯೂರ್ ಉಳ್ಳಾಲ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್ , ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಮೋದರ ಎ., ಕಾರ್ಯದರ್ಶಿ ಎಂ.ಪಿ.ಬಂಗೇರ, ಸೇವಾ ಸಮಿತಿ ಅಧ್ಯಕ್ಷ ಕೆ.ಸುಂದರ ಕುಲಾಲ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಿರಿಧರ ಜೆ. ಮೂಲ್ಯ , ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಕುಲಾಲ್, ಕುಲಾಲರ ಮಾತೃಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಜಲಜಾಕ್ಷಿ ಪಿ., ಶ್ರೀ ವೀರನಾರಾಯಣ ಮಾತೃ ಮಂಡಳಿ ಅಧ್ಯಕ್ಷೆ ಗೀತಾ ಮನೋಜ್ ಮೊದಲಾದವರು ಉಪಸ್ಥಿತರಿದ್ದರು.


    ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ನೂತನ ಶಿಲಾಮಯ ಗರ್ಭಗುಡಿ, ಮುಖಮಂಟಪ, ಸುತ್ತುಪೌಳಿ, ನಮಸ್ಕಾರ ಮಂಟಪ, ಜ್ಞಾನ ಮಂದಿರ, ರಾಜಗೋಪುರ ಹಾಗೂ ವಸಂತ ಮಂಟಪ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದೆ. ವಿಷ್ಣುಸ್ವರೂಪಿ ಶ್ರೀ ವೀರನಾರಾಯಣ ದೇವರ ಸಾನ್ನಿಧ್ಯ ದಕ್ಷಿಣ ಭಾರತದಲ್ಲಿಯೇ ಅತ್ಯಂತ ವಿರಳವಾಗಿರುವ ದೇವಸ್ಥಾನವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts