ಉನ್ನತ ಗುರಿ ತಲುಪುರ ನಿರಂತರ ಪ್ರಯತ್ನ

ವಿಜಯವಾಣಿ ಸುದ್ದಿಜಾಲ ಹುಮನಾಬಾದ್
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉನ್ನತ ಗುರಿ ತಲುಪಲು ನಿರಂತರ ಪ್ರಯತ್ನ ಶೀಲರಾಗಬೇಕು ಎಂದು ಮುಖ್ಯ ಶಿಕ್ಷಣ ದತ್ತಿ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಕರೆ ನೀಡಿದರು.

ಶ್ರೀ ವೀರಭದ್ರೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣಕ್ಕೆ ಸಂಬಂಧಿಸಿದಂತೆ ಅರ್ಥವಾಗದ ವಿಷಯಗಳ ಬಗ್ಗೆ ಪ್ರಾಧ್ಯಾಪಕರೊಂದಿಗೆ ಚಚರ್ಿಸಿ ತಿಳಿದುಕೊಳ್ಳುವ ಮೂಲಕ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಬೇಕು ಎಂದರು.

ಬೀದರ್ನ ಕೆಆರ್ಇಎಸ್ ಔಷಧ ವಿಜ್ಞಾನ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಕ್ರಾಂತಿಕುಮಾರ ಸಿಸರ್ೆ ವಿಶೇಷ ಉಪನ್ಯಾಸ ನೀಡಿ, ಧನಾತ್ಮಕ ಚಿಂತನೆಯೊಂದಿಗೆ ಸತತ ವಿದ್ಯಾಭ್ಯಾಸದಲ್ಲಿ ತೊಡಗಿದ್ದಲ್ಲಿ ಯಶಸ್ಸು ಪಡೆಯಲು ಸಾಧ್ಯ. ಪರೀಕ್ಷೆಗೆ ಹೆದರದೆ ಧೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದರು.

ಮುಂಬೈ ಐಪಿಸಿಎ ಕಂಪನಿಯ ಉತ್ಪಾದನಾ ವಿಭಾಗದ ವ್ಯವಸ್ಥಾಪಕ ಡಾ. ನಾರಾಯಣ ಪಾಟೀಲ್, ಕಾಲೇಜಿನ ಪ್ರಾಚಾರ್ಯ ಡಾ. ನಾಗೇಂದ್ರಕುಮಾರ ಧುಮ್ಮನಸೂರೆ ಪ್ರಾಸ್ತಾಕವಾಗಿ ಮಾತನಾಡಿದರು. ಉತ್ತಮ ಫಲಿತಾಂಶದೊಂದಿಗೆ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.