

ಪುತ್ತೂರು ಗ್ರಾಮಾಂತರ: ಮುಂಡೂರು ಮೃತ್ಯುಂಜಯೇಶ್ವರ ದೇವಳ ಸಭಾಭವನದಲ್ಲಿ ಪುತ್ತಿಲ ಶ್ರೀರಾಮ ಗೆಳೆಯರ ಬಳಗ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ತೃತೀಯ ವರ್ಷದ ಶ್ರೀ ವೀರಾಂಜನೇಯ ಸ್ವಾಮಿ ಕಲ್ಪೋಕ್ತ ಪೂಜೆ, ಸುಧರ್ಮ ಸಭೆ ನಡೆಯಿತು.
ಧಾರ್ಮಿಕ ಸಭೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷ ಅರುಣ್‌ಕುಮಾರ್ ಪುತ್ತಿಲ ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಹಿಂದು ಜಾಗರಣಾ ವೇದಿಕೆ ಮುಖಂಡ ಗಣರಾಜ್ ಭಟ್ ಕೆದಿಲ ಧಾರ್ಮಿಕ ಉಪನ್ಯಾಸ ನೀಡಿದರು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು ಮಾತನಾಡಿದರು. ಹೈನುಗಾರಿಕೆಯಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ಪಡೆದಿರುವ ಜಯಗುರು ಆಚಾರ್ ಹಿಂದಾರು, ನಡಿಗೆ ಸ್ಪರ್ಧೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸಾಧನೆ ಮಾಡಿರುವ ಕ್ಯಾಂಪ್ಕೊ ಉದ್ಯೋಗಿ ಭುವನೇಶ್ವರಿ ಅಜ್ಜಿಕಲ್ಲು ಅವರನ್ನು ಸನ್ಮಾನಿಸಲಾಯಿತು. ಶ್ರೀರಾಮ ಗೆಳೆಯರ ಬಳಗ ಅಧ್ಯಕ್ಷ ಅನಿಲ್ ಕಣ್ಣರನೂಜಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ, ಕಲ್ಲಮ ರಾಘವೇಂದ್ರ ಮಠದ ಮೊಕ್ತೇಸರ ಸೀತಾರಾಮ ಭಟ್ ಕಲ್ಲಮ, ಮುಂಡೂರು ಗ್ರಾಪಂ ಅಧ್ಯಕ್ಷ ಚಂದ್ರಶೇಖರ್ ಸರ್ವೆ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀರಾಮ ಗೆಳೆಯರ ಬಳಗ ಪದಾಧಿಕಾರಿಗಳು ಉಪಸ್ಥಿತರಿದ್ದರು.