

ಬೆಳ್ತಂಗಡಿ: ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯ, ಮಹಿಳಾ ಘಟಕ ಮತ್ತು ಯುವ ವಿಪ್ರ ವೇದಿಕೆ ವತಿಯಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ ವಿಷ್ಣುಸಹಸ್ರನಾಮ ಪಠಣದ ಮೂಲಕ ಲಕ್ಷ ತುಳಸಿ ಅರ್ಚನೆ ನಡೆಯಿತು. ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ನೇತೃತ್ವದಲ್ಲಿ ಅರ್ಚಕ ರಾಮಚಂದ್ರ ಹೊಳ್ಳ ಅವರಿಂದ ಪ್ರಾರ್ಥನೆ ನಡೆಯಿತು. ಶ್ರೀಪತಿ ಎಳಚಿತ್ತಾಯ ಪೌರೋಹಿತ್ಯದಲ್ಲಿ, ತುಳು ಶಿವಳ್ಳಿ ಉಜಿರೆ ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಯಜಮಾನಿಕೆಯಲ್ಲಿ 50ಕ್ಕೂ ಮಿಕ್ಕಿ ವಿಪ್ರರು, ಮಹಿಳೆಯರು ಹಾಗೂ ವಟುಗಳಿಂದ ಎರಡಾವರ್ತಿ ಶ್ರೀವಿಷ್ಣು ಸಹಸ್ರನಾಮ ಪಠಣದ ಮೂಲಕ ಲಕ್ಷ ತುಳಸಿ ಅರ್ಚನೆ ಹಾಗೂ ಮಂಗಳಾರತಿ ನಡೆಯಿತು.
ಶಿವಳ್ಳಿ ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ಡಾ.ಎಂ.ಎಂ.ದಯಾಕರ್, ತಾಲೂಕು ಶಿವಳ್ಳಿ ಸಭಾ ಕಾರ್ಯದರ್ಶಿ ರಾಜಪ್ರಸಾದ್ ಪೊಲ್ನಾಯ, ಉಜಿರೆ ವಲಯ ಕಾರ್ಯದರ್ಶಿ ಹರ್ಷಕುಮಾರ್ ಕೆ.ಎನ್, ತಾಲೂಕು ಮಹಿಳಾ ಘಟಕ ಅಧ್ಯಕ್ಷೆ ಜಯಾ ಅನಂತಕೃಷ್ಣ ಆರ್ಮುಡತ್ತಾಯ, ತಾಲೂಕು ಯುವ ವಿಪ್ರ ವೇದಿಕೆ ಅಧ್ಯಕ್ಷ ಸೂರ್ಯನಾರಾಯಣ ಮುರುಡಿತ್ತಾಯ, ವಲಯ ಮಹಿಳಾ ಘಟಕ ಅಧ್ಯಕ್ಷೆ ಜ್ಯೋತಿ ಗುರುರಾಜ್ ಮೊದಲಾದವರು ಭಾಗವಹಿಸಿದ್ದರು.