

ಅಮರಾವತಿ: ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ(Srikakulam tragedy) ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ, ದುರಂತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಘಟನೆಯಿಂದ ತೀವ್ರ ದುಃಖವಾಗಿದೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಈ ದುರಂತದ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ತೀವ್ರ ನೋವುಂಟಾಗಿದೆ. ಅಲ್ಲದೆ, ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳು ಇವೆ. ಈ ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಅಲ್ಲದೆ, ಮೃತರ ಹತ್ತಿರದ ಸಂಬಂಧಿಕರಿಗೆ PMNRF ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ದುರಂತದಲ್ಲಿ ಗಾಯಗೊಂಡವರಿಗೆ ತಲಾ 50,000 ರೂ. ನೀಡಲಾಗುವುದು PMO ಘೋಷಿಸಿದೆ.
ಈ ದುರಂತಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಅಮಿತ್ ಷಾ, ಈ ಘಟನೆಯಿಂದ ಆಘಾತಗೊಳಿಸಿದೆ ಮತ್ತು ಬಲಿಯಾದವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಷಾ, ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಭಕ್ತರು ಸಾವನ್ನಪ್ಪಿದ ಘಟನೆಯು ನನ್ನನ್ನು ತೀವ್ರವಾಗಿ ಆಘಾತಗೊಳಿಸಿದೆ. ಅಲ್ಲದೆ, ಮೃತ ಭಕ್ತರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ಘಟನೆಯಲ್ಲಿ ಗಾಯಗೊಂಡ ಭಕ್ತರು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಈ ದುರಂತದ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು.
ಅಲ್ಲದೆ, ಈ ಘಟನೆಯಲ್ಲಿ ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. (ಏಜೆನ್ಸೀಸ್)