ಕಬ್ಬಿನಾಲೆ ದೇವಸ್ಥಾನದಲ್ಲಿ ಶ್ರೀಮನ್ಮಹಾರಥೋತ್ಸವ

JATHRE
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಕಬ್ಬಿನಾಲೆ ಕೆಳಮಠ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಮಹಾರಥೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ಸಂಪನ್ನಗೊಂಡಿತು.

ಕೆ.ಎಸ್.ರಾಮಕೃಷ್ಣ ತಂತ್ರಿ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ಲಕ್ಷ್ಮೀಶ ಭಾರದ್ವಾಜ್ ನೇತೃತ್ವದಲ್ಲಿ ಗಣಪತಿ ಹೋಮ, ನವಕಲಶಾಭಿಷೇಕ, ಅಲಂಕಾರ ಪೂಜೆ, ತುಲಾಭಾರ ಸೇವೆ, ರಥ ಸಂಪ್ರೋಕ್ಷಣೆ, ಮಹಾಪೂಜೆ, ರಥಾರೋಹಣ, ಪಲ್ಲಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಭಜನೆ, ದೀಪಾರಾಧನೆ, ರಥೋತ್ಸವ, ನರ್ತನ ಬಲಿ, ಕೆರೆ ದೀಪ, ಹಚ್ಚಡಸೇವೆ, ಕಟ್ಟೆ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಘವೇಂದ್ರ ಭಟ್, ಕೆ.ನಾರಾಯಣ ಭಟ್, ಕೆ.ಚಂದ್ರಶೇಖರ ಬಾಯಾರಿ, ಯೋಗಿಂದ್ರ ಹೆಬ್ಬಾರ್, ಸದಾಶಿವ ಶೆಟ್ಟಿ, ಜಗದೀಶ ಪೂಜಾರಿ, ಶೇಖರ್ ಗೌಡ, ರೇಣುಕ ಶೆಟ್ಟಿಗಾರ್, ಗಾಯತ್ರಿ ಮಡಿವಾಳ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net