More

    ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ

    ಶ್ರೀಮಂಗಲ: ದಕ್ಷಿಣ ಕೊಡಗು ವ್ಯಾಪ್ತಿಯಲ್ಲಿ ಕಳೆದ 3 ದಿನಗಳಿಂದ ಮುಂಗಾರು ಮಳೆ ಬಿರುಸುಗೊಂಡಿದೆ. ಅದರಲ್ಲೂ ಕಳೆದ 24 ಗಂಟೆಯಲ್ಲಿ ಘಟ್ಟ ಪ್ರದೇಶ ವ್ಯಾಪ್ತಿಯ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ, ಕುಟ್ಟದಲ್ಲಿ ನಿರಂತರ ಮಳೆಯಾಗುತ್ತಿದೆ.

    ಬಿರುನಾಣಿ ಗ್ರಾಪಂ ವ್ಯಾಪ್ತಿಯ ಬಿರುನಾಣಿ- ನ್‌ಟ್ ಕುಂದ್ ರಸ್ತೆ ನಡುವೆ ನದಿ ತುಂಬಿ ಹರಿಯುತ್ತಿದ್ದು, ಇಲ್ಲಿನ ಸೇತುವೆ ಮೇಲೆ 3 ಅಡಿ ಎತ್ತರಕ್ಕೆ ನೀರು ಹರಿಯುತ್ತಿದೆ. ನ್‌ಟ್ ಕುಂದ್ ಸುತ್ತ ಬ್ರಹ್ಮಗಿರಿ ಅರಣ್ಯ ಸುತ್ತುವರಿದಿದ್ದು, ಈಗ ಏಕೈಕ ರಸ್ತೆ ಮಾರ್ಗ ಕಡಿತವಾಗಿದೆ. ಕಳೆದ ವರ್ಷ ಇದೇ ಪ್ರದೇಶಕ್ಕೆ ಸಂಪರ್ಕ ಕಲ್ಪಿಸಲು ನಿರ್ಮಿಸಿದ್ದ ಕಬ್ಬಿಣದ ತೂಗು ಸೇತುವೆ ಪ್ರವಾಹಕ್ಕೆ ಕೊಚ್ಚಿ ಹೋಗಿತ್ತು.

    ಈ ಪ್ರದೇಶದಲ್ಲಿ ಸುಮಾರು 12 ಕುಟುಂಬಗಳಿದ್ದು, ಸಂಪರ್ಕ ಕಡಿತದಿಂದ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈಗ ಇರುವ ಸೇತುವೆಯನ್ನು 10 ಅಡಿ ಎತ್ತರಕ್ಕೆ ನಿರ್ಮಿಸಿದರೆ, ಸೇತುವೆ ಮುಳುಗುವುದನ್ನು ತಡೆಯಬಹುದಾಗಿದೆ. ನಿರಂತರ ಮಳೆಯಿಂದ ಸಂಪರ್ಕ ಕಡಿತ ಹಲವು ದಿನ ಮುಂದುವರಿದರೆ, ಈ ಪ್ರದೇಶದ ಜನರಿಗೆ ಅಗತ್ಯ ವಸ್ತುಗಳನ್ನು ಒದಗಿಸಬೇಕಾಗಿ ಗ್ರಾಮದ ಕರ್ತಮಾಡ ಧನು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

    ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿರುವುದರಿಂದ ಈ ವ್ಯಾಪ್ತಿಯ ಕಕ್ಕಟ್ಟ್ ಪೊಳೆ ನದಿ ನದಿ ತುಂಬಿ ಹರಿಯುತ್ತಿದೆ. ಅಲ್ಲದೆ, ಲಕ್ಷ್ಮಣತೀರ್ಥ, ರಾಮತೀರ್ಥ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts