

ನೆಲಮಂಗಲ: ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ ಅವರನ್ನು ಇಂದು 'ಪ್ರಣಯ ರಾಜ' ಶ್ರೀನಾಥ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ನೆಲಮಂಗಲದ ಬಳಿಯ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕಳೆದ ಹಲವು ವರ್ಷಗಳಿಂದ ಲೀಲಾವತಿ ತಮ್ಮ ಮಗ ಮತ್ತು ನಟ ವಿನೋದ್ ರಾಜ್ ಅವರೊಂದಿಗೆ ವಾಸಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ವರ್ಷ ನಟಿಯರಾದ ಸುಧಾರಾಣಿ, ಶ್ರುತಿ, ಮಾಳವಿಕಾ ಅವಿನಾಶ್ ಮುಂತಾದವರು ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.
ಇಂದು ಬೆಳಿಗ್ಗೆ ಶ್ರೀನಾಥ್, ಅಲ್ಲದೆ ಪದ್ಮಾವಾಸಂತಿ, ಸುಂದರ್ ರಾಜ್, ಪ್ರಮಿಳಾ ಜೋಷಾಯಿ ಮುಂತಾದವರು ಭೇಟಿ ಕೊಟ್ಟಿ ಕುಶಲೋಪರಿ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ನಟ ವಿನೋದ್ ರಾಜ್ ಸಹ ಹಾಜರಿದ್ದರು.