More

    ಬ್ರಾಹ್ಮಿಯಾಗಿ ಭಕ್ತರನ್ನು ಅನುಗ್ರಹಿಸಿದ ಶೃಂಗೇರಿ ಶಾರದೆ

    ಶೃಂಗೇರಿ: ನವರಾತ್ರಿ ಉತ್ಸವದ ಪ್ರಯುಕ್ತ ಶ್ರೀಜಗನ್ಮಾತೆ ಕೈಯಲ್ಲಿ ಕಮಂಡಲು, ಅಕ್ಷಮಾಲೆ, ಪುಸ್ತಕ, ಪಾಶ ಮತ್ತು ಚಿನ್ಮುದ್ರೆ ಗಳನ್ನು ಧರಿಸಿ ಹಂಸವಾಹನಾರೂಢಳಾಗಿ, ಬ್ರಹ್ಮನ ಪಟ್ಟದ ರಾಣಿಯಾಗಿ ಬ್ರಾಹ್ಮಿಯಾಗಿಭಕ್ತರನ್ನು ಅನುಗ್ರಹಿಸಿದಳು.
    ನವರಾತ್ರಿ ಪ್ರಯುಕ್ತ ಸೋಮವಾರ ಶ್ರೀಮಠದಲ್ಲಿ ನಾಲ್ಕು ವೇದಗಳ ಪಾರಾಯಣಗಳು, ವಾಲ್ಮೀಕಿ ರಾಮಾಯಣ, ದೇವಿ ಭಾಗವತ, ಮಾಧವೀಯ ಶಂಕರ ದಿಗ್ವಿಜಯ, ಸೂತ ಸಂಹಿತೆ, ಲಕ್ಷ್ಮೀನಾರಾಯಣ ಹೃದಯ,ದುರ್ಗಾಸಪ್ತಶತಿ ಪಾರಾಯಣಗಳು ನೆರವೇರಿತು. ದುರ್ಗಾ ಜಪ,ಭುವನೇಶ್ವರಿ ಜಪ, ಶ್ರೀ ಸೂಕ್ತ ಜಪಗಳು, ಶ್ರೀ ಚಂದ್ರಮೌಳೀಶ್ವರ ಸ್ವಾಮಿಗೆ ಶತರುದ್ರಾಭೀಷೇಕ, ಜಗನ್ಮಾತೆಯ ಅವಾಸಸ್ಥಾನವೆಂದು ಶಾಸದಲ್ಲಿ ತಿಳಿಸಿರುವ ಶ್ರೀ ಚಕ್ರಕ್ಕೆ ನವಾವರಣ ಪೂಜೆ, ಸುವಾಸಿನೀ ಹಾಗೂ ಕುಮಾರೀ ಪೂಜೆ ನೆರವೇರಿತು.ಜಗದ್ಗುರುಗಳು ಶಾರದೆ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
    ಶ್ರೀ ಮಠದ ಸಂಪ್ರದಾಯಕ್ಕೆ ಅನುಗುಣವಾಗಿ ಜಗದ್ಗುರು ಶ್ರೀವಿಧುಶೇಖರಭಾರತೀ ಸ್ವಾಮೀಜಿ ಅವರು ದೇವಾಲಯ ಪ್ರವೇಶಿಸಿದ ಬಳಿಕ ವ್ಯಾಖ್ಯಾನ ಸಿಂಹಾಸನದಲ್ಲಿರುವ ಶ್ರೀ ಶಾರದೆ ಮೂರ್ತಿಯನ್ನು ಬಂಗಾರದ ರಥದಲ್ಲಿ ಕುಳ್ಳಿರಿಸಿ ದೇವಾಲಯದ ಒಳಪ್ರಕಾರದಲ್ಲಿ ಮೂರು ಸುತ್ತು ವೇದ, ವಾದ್ಯ ೋಷಗಳೊಂದಿಗೆ ರಥೋತ್ಸವ ನೆರವೇರಿತು. ಶ್ರೀ ಶಾರದೆಗೆ ಅಭಿಮುಖವಾಗಿ ಇರಿಸಿದ ಸಿಂಹಾಸನದಲ್ಲಿ ಯತಿಗಳು ಅಸೀನರಾದ ಬಳಿಕ ವೇದಗಳ ಪಾರಾಯಣ,ಪಂಚಾಂಗಶ್ರವಣ, ಸಂಗೀತ, ಸರ್ವವಾದ್ಯಸೇವೆ ನಡೆಯಿತು. ದೇವಿಗೆ ಮಹಾಮಂಗಳಾರತಿ ನೆರವೇರಿತು.
    ಸಂಜೆ ನಡೆದ ಬೀದಿ ಉತ್ಸವದಲ್ಲಿ ಪಪಂ ಭಕ್ತಾದಿಗಳು, ಪತಂಜಲಿ ಯೋಗಶಿಕ್ಷಣ ಸಂಸ್ಥೆ, ಜಿಎಸ್‌ಬಿ ಸಮಾಜ ಹಾಗೂ ಆರ್ಯವೈಶ್ಯ ಸಮಾಜ, ಶ್ರೀ ರಾಮಸೇವಾ ಸಮಿತಿ, ಕೆರೆ ಅಂಜನೇಯ ಮತ್ತು ಚಪ್ಪರಾಂಜನೇಯಸ್ವಾಮಿ ಭಜನಾಮಂಡಳಿ,ಜ್ಞಾನಭಾರತೀ ವಿದ್ಯಾಕೇಂದ್ರ ಹಾಗೂ ಜಗದ್ಗುರು ಅಭಿನವ ವಿದ್ಯಾತೀರ್ಥ ಪ್ರೌಢಶಾಲಾ ವಿದ್ಯಾರ್ಥಿಗಳು, ಪಪಂ ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿವರ್ಗದವರು ಬೀದಿ ಉತ್ಸವದಲ್ಲಿ ಭಾಗಿಯಾದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಂಗಳೂರಿನ ಪ್ರಜ್ಞಾ ಅಡಿಗ ಮತ್ತು ಸಂಗಡಿಗರಿಂದ ಹಾಡುಗಾರಿಕೆ ನೆರವೇರಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts