

ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆ ಆಶ್ರಯದಲ್ಲಿ ನಡೆದ ಕುಂದಾಪುರ ವಲಯಮಟ್ಟದ ಪ್ರೌಢಶಾಲಾ ಬಾಲಕ- ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ ಪ್ರಥಮ ಸ್ಥಾನಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.