ಪದೋನ್ನತಿಗಾಗಿ ಶ್ರೀನಿವಾಸ ನಾಯ್ಕರಿಗೆ ಸನ್ಮಾನ

New Project (42)
Published on

ಬಂಟ್ವಾಳ: ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸತತವಾಗಿ 33 ವರ್ಷ ಸೇವೆ ಸಲ್ಲಿಸಿ ಪ್ರಾಂಶುಪಾಲರಾಗಿ ಪದೋನ್ನತಿಗೊಂಡು ಶಿವಮೊಗ್ಗ ಜಿಲ್ಲೆಯ ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆಗೊಂಡಿರುವ ಶ್ರೀನಿವಾಸ ನಾಯ್ಕ ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ವತಿಯಿಂದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿನಂದಿಸಿದರು.

ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ವಿಶ್ವನಾಥ ಶೆಟ್ಟಿಗಾರ್, ಮಂದರಾತಿ ಎಸ್.ಶೆಟ್ಟಿ, ಪುಷ್ಪಲತಾ ಎಸ್.ಆರ್., ವೃತ್ತಿ ಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ, ನವೀನ್ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net