ಶ್ರೀಪುತ್ತಿಗೆ ನೃಸಿಂಹ ಸಭಾಭವನ ಉದ್ಘಾಟನೆ ಅ.24ಕ್ಕೆ

Sutturu Shree
Published on

ಮೈಸೂರಿನ ಸುತ್ತೂರು ಶ್ರೀಗಳಿಂದ ಆಶೀರ್ವಚನ

ವಿಜಯವಾಣಿ ಸುದ್ದಿಜಾಲ ಉಡುಪಿ

ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶಯದಂತೆ ಗೀತಾ ಮಂದಿರದಲ್ಲಿ ಶ್ರೀಪುತ್ತಿಗೆ ನೃಸಿಂಹ ಸಭಾಭವನ ನಿರ್ಮಿಸಲಾಗಿದ್ದು, ಅ.24ರಂದು ಸಂಜೆ 4 ಗಂಟೆಗೆ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.

Sugunendra
ಸುಗುಣೇಂದ್ರ ತೀರ್ಥ ಶ್ರೀಪಾದರು.

ಸಭಾಭವನ ಉದ್ಘಾಟನೆಯ ಬಳಿಕ ರಾಜಾಂಗಣದಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು, ಸುತ್ತೂರು ಶ್ರೀಗಳು ಆಶೀರ್ವಚನ ನೀಡಲಿದ್ದಾರೆ. ಸುಗುಣೇಂದ್ರ ಶ್ರೀ, ಪುತ್ತಿಗೆ ಪಟ್ಟದ ಕಿರಿಯ ಯತಿ ಸುಶ್ರೀಂದ್ರ ಶ್ರೀ ಸಾನ್ನಿಧ್ಯ ವಹಿಸಲಿದ್ದಾರೆ.

ಒರಿಸ್ಸಾ ಹೈಕೋರ್ಟ್​ನ ಮುಖ್ಯನ್ಯಾಯಮೂರ್ತಿ ಕೃಷ್ಣ ದೀಕ್ಷಿತ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ ಇತರರು ಪಾಲ್ಗೊಳ್ಳಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6ರಿಂದ ರಾತ್ರಿ 8ರ ವರೆಗೆ, ಡ್ರಮ್ಸ್​ ವಾದ್ಯದ ಪ್ರಖ್ಯಾತ ಕಲಾವಿದ ಶಿವಮಣಿ ಅವರಿಂದ ನಾದ ವೈಭವಂ ನಡೆಯಲಿದೆ ಎಂದು ಪುತ್ತಿಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net