ಸಿದ್ದರಾಮಯ್ಯ ಚಾಮುಂಡೇಶ್ವರಿ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ: ಶ್ರೀರಾಮುಲು

ಮೈಸೂರು: ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಸೇಡನ್ನು ತೀರಿಸಿಕೊಳ್ಳುವ ಅವಕಾಶವನ್ನು ಸಿದ್ದರಾಮಯ್ಯ ಅವರು ಈಗ ಬಳಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ದೇವೇಗೌಡರನ್ನೇ ಸೋಲಿಸಲು ಪ್ಲ್ಯಾನ್​ ಮಾಡಿದ್ದಾರೆ. ಈ ಮೂಲಕ ಹಾವಿನ ದ್ವೇಷದಂತೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಜತೆಗೆ ಸಚಿವ ಜಿ.ಟಿ. ದೇವೇಗೌಡ ಅವರು ಮೈತ್ರಿ ಅಭ್ಯರ್ಥಿ ಸೋತರೆ ನಾವು ಜವಾಬ್ದಾರರಲ್ಲ ಎಂದಿದ್ದಾರೆ. ಜಿಟಿಡಿ ಹೇಳಿಕೆಯಿಂದ ಎರಡೂ ಪಕ್ಷಗಳ ನಾಯಕರ ನಡುವೆ ಸಮನ್ವಯತೆ ಇಲ್ಲ ಎಂಬುದು ಗೊತ್ತಾಗುತ್ತದೆ. ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಶ್ರೀರಾಮುಲು ತಿಳಿಸಿದರು.

ಸಂವಿಧಾನ ಬದಲಾವಣೆ ಸುಲಭವಲ್ಲ

ಸಂವಿಧಾನವನ್ನು ಬದಲಾವಣೆ ಮಾಡುವುದು ಮಗ್ಗಿಪುಸ್ತಕ, ಪಠ್ಯಪುಸ್ತಕ ಬದಲಾವಣೆ ಮಾಡಿದಂತೆ ಅಲ್ಲ. ಸಂವಿಧಾನದ ಬಗ್ಗೆ ಮಾತನಾಡುವಾಗ ಯಾರೇ ಆಗಲಿ ಎಚ್ಚರಿಕೆಯಿಂದ ಮಾತನಾಡಬೇಕು. ಸ್ವತಃ ವಕೀಲರಾಗಿರುವ ಸಿದ್ದರಾಮಯ್ಯ ಅವರು ಸಂವಿಧಾನ ತಿದ್ದುಪಡಿ ಕುರಿತಾದ ತೀರ್ಪುಗಳನ್ನು ಓದಿಕೊಳ್ಳಲಿ. ಸಂವಿಧಾನದ ಮೂಲ ಆಶಯವನ್ನು ಬದಲಾವಣೆ ಮಾಡಲು ಲೋಕಸಭೆಗೂ ಅಧಿಕಾರ ಇಲ್ಲ ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ಸಂವಿಧಾನವನ್ನು ಬದಲಿಸುವುದು ಅಷ್ಟು ಸುಲಭವದಲ್ಲಿ ಸಾಧ್ಯವಿಲ್ಲ ಎಂದು ಚಾಮರಾಜನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್​ ಪ್ರಸಾದ್​ ತಿಳಿಸಿದ್ದಾರೆ.

Leave a Reply

Your email address will not be published. Required fields are marked *