

ಮಂಡ್ಯ: ಸಿದ್ದರಾಮಯ್ಯ ಕಣ್ಣು ತೆರೆದರೆ ಮೋದಿ ಕಾಣುತ್ತಾರೆ. ಕನಸಿನಲ್ಲಿ ಬೊಮ್ಮಾಯಿ ಬರುತ್ತಾರೆ. ಹೀಗಾಗಿ ಎಲ್ಲೆಂದರಲ್ಲಿ ನಿದ್ದೆ ಮಾಡುತ್ತಿದ್ದ ಸಿದ್ದರಾಮಯ್ಯ ಅವರಿಗೆ ಈ ನಿದ್ದೆ ಬರುತ್ತಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಶ್ರೀರಾಮುಲು, ಹಿಂದುಳಿದ ಸಮುದಾಯವನ್ನು ಉಪಯೋಗಿಸಿಕೊಂಡು ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಆದರೆ ಹಿಂದುಳಿದ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾತ್ರ ಮಾಡಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡಲಿಲ್ಲ. ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿಗೆ 24% ಮೀಸಲಾತಿ ನೀಡಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಹಿಂದುಳಿದ ವರ್ಗಗಳು ಬಿಜೆಪಿ ಬೆಂಬಲಿಸಲಿವೆ. ಇದು ಕಾಂಗ್ರೆಸ್‌ಗೆ ಭಯ ತಂದಿದೆ ಎಂದು ಹೇಳಿದರು.